
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ಅಂಗನವಾಡಿ ಕೇಂದ್ರದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ಗ್ರಾಮದ ಯಶವಂತ್- ಗೌರಿ ಎಂಬವರ ಮಗ, ನಾಲ್ಕುವರೆ ವರ್ಷದ ರೋಷನ್ ಮೃತಪಟ್ಟ ಬಾಲಕ.
ಹಾವು ಕಚ್ಚಿದ ತಕ್ಷಣ ಸಮಯಕ್ಕೆ ಸರಿಯಾಗಿ ಆಂಬ್ಯುಲೆನ್ಸ್ ಸಿಗದೆ ಹೋದುದರಿಂದ, ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಗುವನ್ನು ತಂದೆ ಬೈಕ್ನಲ್ಲೇ ಕರೆತಂದಿದ್ದಾರೆ.
ಹೆತ್ತೂರಿನಿಂದಲೂ ಸಕಲೇಶಪುರಕ್ಕೆ ಆಂಬ್ಯುಲೆನ್ಸ್ ಸಿಕ್ಕಿಲ್ಲ. ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಸಿಗದೆ ಬಾಲಕ ಮೃತಪಟ್ಟಿರುವುದಾಗಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.