ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ : ಶೀಘ್ರ ಸಿಗಲಿದೆ ಶಿಕ್ಷಕಿ ಸ್ಥಾನಮಾನ

ಅಂಗನವಾಡಿ ಕಾರ್ಯಕರ್ತೆಯರಿಗೊಂದು ಸಿಹಿ ಸುದ್ದಿ. ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರೆಂದು ಪರಿಗಣಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ.
ಈ ಮೂಲಕ 20 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಶಿಕ್ಷಕರ ಸ್ಥಾನಮಾನ ಸಿಗಲಿದೆ.ಇನ್ನು ಮುಂದೆ ಅಂಗನವಾಡಿ ಕಾರ್ಯಕರ್ತೆಯರಿಗೂ ಶಿಕ್ಷಕರ ಸ್ಥಾನಮಾನ ಸಿಗಲಿದೆ.
ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕರು ಎಂದು ಪರಿಗಣಿಸುವಂತೆ ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸ್ಸು ಮಾಡಿದೆ. ಉತ್ತರಕಾಂಡ ರಾಜ್ಯದಲ್ಲಿ ಈ ಯೋಜನೆಯನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿದೆ.
ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಈ ಯೋಜನೆ ಜಾರಿಗೊಳಿಸಲು ನಿರ್ಧಾರ ಮಾಡಲಾಗಿದೆ.ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕರೆಂದು ಪರಿಗಣಿಸಿದ್ದಲ್ಲಿ ಅವರು ಪಡೆಯುತ್ತಿರುವ ಗೌರವ ಧನ, ವೇತನವಾಗಿ ಬದಲಾಗಲಿದೆ.
ಜೊತೆಗೆ ಸೇವಾ ಭದ್ರತೆಯೂ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳ ಜೊತೆಗೆ ಒಂದು ಮತ್ತು ಎರಡನೇ ತರಗತಿಗಳನ್ನು ಸಂಯೋಜಿಸಿ ಶಾಲೆಗಳ ಸ್ವರೂಪ ನೀಡಲು ಯೋಜನೆ ಮಾಡಲಾಗುತ್ತಿದೆ.
ಇಲ್ಲಿವರೆಗೆ ಅಂಗನವಾಡಿ ಕಾರ್ಯಕರ್ತೆಯರು 3 ರಿಂದ 6 ವರ್ಷದೊಳಗಿನ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದರು.
ಮಾತ್ರವಲ್ಲ ಬಾಣಂತಿಯರು, ಗರ್ಭಿಣಿಯರ ಆರೋಗ್ಯದ ಮೇಲೆ ನಿಗಾ ಇರಿಸಲು, ಪೌಷ್ಟಿಕ ಆಹಾರ ವಿತರಣೆ ಸೇರಿದಂತೆ ಸರ್ಕಾರದ ಹಲವು ಯೋಜನೆಗಳ ಅನುಷ್ಠಾನಕ್ಕಾಗಿ ಇವರನ್ನು ಬಳಸಿಕೊಳ್ಳಲಾಗುತ್ತಿತ್ತು.