ರಾಜ್ಯ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ.. ಜೂನ್ 21ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ ಆಗಮನ.

ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಸ್ಕೃತಿ ನಗರಿ ಮೈಸೂರಿಗೆ ಆಗಮಿಸಲಿದ್ದಾರೆ. ಮೋದಿ ಆಗಮನ ಪ್ರಧಾನಿ ಕಾರ್ಯಾಲಯ ಖಚಿತ ಪಡಿಸಿದ್ದು, ಸಂಸದ ಪ್ರತಾಪ್ ಸಿಂಹ ಈ ಕುರಿತು ಟ್ವಿಟ್ ಮಾಡಿ ಮಾಹಿತಿ ನೀಡಿದ್ದಾರೆ.ಜೂನ್ 21 ರ ನಡೆಯುವ ಅಂತಾರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೋದಿ ಮೈಸೂರಿಗೆ ಆಗಮಿಸಲಿದ್ದಾರೆ. ಈ ಹಿಂದೆ ಪ್ರಧಾನ ಮಂತ್ರಿ ಮೋದಿ ಅವರನ್ನ ಯೋಗ ದಿನದಂದು ಮೈಸೂರಿಗೆ ಆಗಮಿಸುವಂತೆ ಮೈಸೂರು ಸಂಸದ ಪ್ರತಾಪ್ ಸಿಂಹ ಆಹ್ವಾನ ಮಾಡಿದ್ದರು. > ಸದ್ಯ ಮೋದಿ ಆಗಮಿಸುವ ಕುರಿತು ಈಗಾಗಲೇ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಪತ್ರ ಬರೆದು ಖಚಿತ ಪಡಿಸಿದೆ.ಆಯುಷ್ ಸಚಿವಾಲಯ ಅಂತಾರಾಷ್ಟ್ರೀಯ ಯೋಗ ದಿನಾಚಣೆಗೆ ನಗರದ ರೇಸ್‌ಕೋರ್ಸ್ ಆವರಣದಲ್ಲಿ ಭರ್ಜರಿ ಸಿದ್ಧತೆ ಮಾಡಲಾಗುತ್ತಿದೆ. ಮೈಸೂರಿನಲ್ಲಿ 2 ಲಕ್ಷ ಯೋಗಪಟುಗಳು ಸೇರಿಸಿ ಏಕಕಾಲದಲ್ಲಿ ಯೋಗ ಮಾಡುವ ಮೂಲಕ ಗಿನ್ನಿಸ್ ದಾಖಲೆ ಸೇರಲು ಸಿದ್ಧರೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

Related Articles

Leave a Reply

Your email address will not be published. Required fields are marked *

Back to top button