
ತಮಿಳುನಾಡಿನ ಎಐಎಡಿಎಂಕೆ ಪಕ್ಷದ ’ಎರಡು ಎಲೆ’ ಚಿನ್ಹೆ ಸ್ಥಗಿತ ಮಾಡಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಕೋರಿ ಸಲ್ಲಿಸಿಕೆಯಾಗಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ನೇತೃತ್ವದ ಪೀಠ, ಜೆಜೆ ಪಕ್ಷದ ಸ್ಥಾಪಕ ಅಧ್ಯಕ್ಷ ಎಂದು ಹೇಳಿಕೊಂಡ ಪಿಎ ಜೋಸೆಫ್ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದೆ.ಈ ಸಂಬಂದದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿ ೨೫ ಸಾವಿರ ರೂಪಾಯಿ ದಂಡ ವಿಧಿಸಿತ್ತು.
ಈ ಹಿನ್ನೆಲೆಯಲ್ಲಿ ಅರ್ಜಿದಾರರು, ಸುಪ್ರೀಂ ಕೋರ್ಟ್ ಮೋರೆ ಹೋಗಿದ್ದರು.ಎನ್ ವಿ ರಮಣ ನೇತೃತ್ವದ ಪೀಠ ವಿಚಾರಣೆಯ ಸಂದರ್ಭದಲ್ಲಿ, ಅರ್ಜಿದಾರರ ಮನವಿ ವಜಾಗೊಳಿಸಿ ನಿಮಗೆ , ‘ಈಗ ಎಷ್ಟು ದಂಡ ವಿಧಿಸಬೇಕು, ಇನ್ನೂ ೨೫ ಸಾವಿರ ರೂ. ವಿಧಿಸಬೇಕೇ, ನಿಮಗೆ ಕೆಲಸವಿಲ್ಲವೇ ಎಂದು ಪ್ರಶ್ನಿಸಿದೆ.
ರಾಜ್ಯದಲ್ಲಿ ಸಾರ್ವಜನಿಕ ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು ಪಳನಿಸ್ವಾಮಿ ಮತ್ತು ಓ ಪನೀರ್‌ಸೆಲ್ವಂ ಅವರ ನಾಯಕತ್ವದ ಸಮಸ್ಯೆ ಬಗೆಹರಿಸುವವರೆಗೆ ’ಎರಡು ಎಲೆ’ ಚಿಹ್ನೆಯನ್ನು ಸ್ಥಗಿತಗೊಳಿಸುವಂತೆ ಅರ್ಜಿದಾರರಾದ ಪಿಎ ಜೋಸೆಫ್ ಕೋರಿದ್ದರು.
ಈ ನಡುವೆ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ನಾಯಕತ್ವಕ್ಕೆ ಸಂಬಂಧಿಸಿದಂತೆ ಜೂನ್ ೨೩ ರಿಂದ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.
ಜುಲೈ ೧೧ ರಂದು ನಡೆದ ಸಾಮಾನ್ಯ ಮಂಡಳಿ ಸಭೆಯಲ್ಲಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರನ್ನು ಹಂಗಾಮಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಿರುವುದು ಮಾನ್ಯವಲ್ಲ ಎಂದು ಮದ್ರಾಸ್ ಹೈಕೋರ್ಟ್‌ನ ನ್ಯಾಯಮೂರ್ತಿ ಜಿ ಜಯಚಂದ್ರನ್ ಹೇಳುವ ಮೂಲಕ ಓ.ಪನ್ನೀರಸೆಲ್ವಂ ಪರವಾಗಿ ತೀರ್ಪು ನೀಡಿದೆ..