ಅಧ್ಯಕ್ಷರ ಆಯ್ಕೆಗೆ ಎಐಸಿಸಿ ಕಸರತ್ತು

ಒಂದೆಡೆ ಹಿರಿಯ ನಾಯಕರ ರಾಜೀನಾಮೆ ಪರ್ವ, ಮತ್ತೊಂದೆಡೆ ನೂತನ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಕಗ್ಗಂಟಿನ ನಡುವೆಯೇ ಇಂದು ಕಾಂಗ್ರೆಸ್ ಪಕ್ಷದ ಮಹತ್ವದ ಕಾರ್ಯಕಾರಿ ಸಮಿತಿಸಭೆ ನಡೆಯಲಿದ್ದು, ಈ ಸಭೆಯಲ್ಲಿ ಪಕ್ಷದ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣಾ ದಿನಾಂಕ ನಿಗದಿಯಾಗುವ ನಿರೀಕ್ಷೆ ಇದೆ.
ಸೋನಿಯಾಗಾಂಧಿಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಎಲ್ಲ ವಿದ್ಯಮಾನಗಳ ನಡುವೆ ಇಂದು ಮಹತ್ವದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಡೆಯಲಿದೆ. ಚುನಾವಣಾ ದಿನಾಂಕ ನಿಗದಿಯಾಗುವ ನಿರೀಕ್ಷೆ ಇದೆ.
ಆರೋಗ್ಯ ತಪಾಸಣೆಗಾಗಿ ಸೋನಿಯಾಗಾಂದಿ ಅವರು ಲಂಡನ್‌ಗೆ ತೆರಳಿದ್ದು, ಸವರ ಜತೆ ರಾಹುಲ್-ಪ್ರಿಯಂಕಗಾಂಧಿ ಸಹ ಲಂಡನ್‌ನಲ್ಲಿದ್ದು, ಈ ಮೂವರು ವರ್ಚುವಲ್ ಮೂಲಕ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವರು.ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರನ್ನು ಸೆಪ್ಟೆಂಬರ್‌ನಲ್ಲಿ ಆಯ್ಕೆ ಮಾಡುವ ಜರೂರತ್ತು ಇದ್ದು, ನೂತನ ಅಧ್ಯಕ್ಷರ ಆಯ್ಕೆಗೆ ಈ ಕಾರ್ಯಕಾರಿಯಲ್ಲಿ ಚುನಾವಣೆ ದಿನಾಂಕ ನಿಗದಿಯಾಗುವ ಸಾಧ್ಯತೆಗಳು ಹೆಚ್ಚಿವೆ.
ಮುಂದಿನ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ನೂತನ ಅಧ್ಯಕ್ಷರ ಆಯ್ಕೆಯನ್ನು ಮಾಡಬೇಕಿದ್ದು, ಭಾರತ್‌ಜೋಡೊ ಯಾತ್ರೆ ನೇತೃತ್ವ ವಹಿಸಿರುವ ರಾಹುಲ್‌ಗಾಂಧಿಯವರೇ ಪಕ್ಷದ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಬೇಕು ಎಂಬ ಒತ್ತಡಗಳು ಹೆಚ್ಚಿದ್ದರೂ ರಾಹುಲ್‌ಗಾಂಧಿ ಮಾತ್ರ ಅಧ್ಯಕ್ಷ ಹುದ್ದೆಯನ್ನು ವಹಿಸಿಕೊಳ್ಳಲು ಒಪ್ಪುತ್ತಿಲ್ಲ. ಹೀಗಾಗಿ ನೂತನ ಅಧ್ಯಕ್ಷರ ಆಯ್ಕೆ ಕಗ್ಗಂಟಾಗಿದೆ.
ಗಾಂಧಿ ಕುಟುಂಬಕ್ಕೆ ನಿಷ್ಟರಾಗಿರುವವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಕಸರತ್ತುಗಳು ನಡೆದಿದ್ದು, ಈ ಕಾರ್ಯಕಾರಿಣಿಯಲ್ಲಿ ನೂತನ ಅಧ್ಯಕ್ಷರ ಹುದ್ದೆಗೆ ಯಾರನ್ನು ನೇಮಿಸಬೇಕು ಎಂಬ ಬಗ್ಗೆಯೂ ಚರ್ಚೆಗಳು ನಡೆಯಲಿದ್ದು, ರಾಜಸ್ತಾನದ ಮುಖ್ಯಮಂತ್ರಿ ಅಶೋಕ್‌ಗೆಲ್ಹೋಟ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಬಗ್ಗೆ ಹಿರಿಯ ನಾಯಕರುಗಳು ಚರ್ಚಿಸಿದ್ದಾರೆ.
ರಾಜಾಸ್ತಾನ ಮುಖ್ಯಮಂತ್ರಿ ಅಶೋಕ್‌ಗೆಲ್ಹೋಟ್ ಪಕ್ಷದ ಅಧ್ಯಕ್ಷರಾದರೆ ಗಾಂಧಿ ಕುಟುಂಬ ಅವರನ್ನು ಬೆಂಬಲಿಸಲಿದೆ ಎಂದು ಮೂಲಗಳು ತಿಳಿಸಿದೆ.ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲುಂಡು ಪಕ್ಷ ನೆಲ ಕಚ್ಚಿದ ಹಿನ್ನೆಲೆಯಲ್ಲಿ ರಾಹುಲ್‌ಗಾಂಧಿ ಅವರು ಈ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಆ ಬಳಿಕ ಸೋನಿಯಾಗಾಂಧಿ ಅವರು ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.ಅನಾರೋಗ್ಯದ ಕಾರಣ ಸೋನಿಯಾಗಾಂಧಿ ಅವರಿಗೆ ಅಧ್ಯಕ್ಷ ಹುದ್ದೆಯ ಸಂಪೂರ್ಣ ಕಾರ್ಯಾಭಾರ ನಿಭಾಯಿಸಲು ಆಗುತ್ತಿಲ್ಲ.
ಹಾಗಾಗಿ ನೂತನ ಅಧ್ಯಕ್ಷರ ಆಯ್ಕೆ ಆಗಲೇಬೇಕಿದೆ.ಇಂದು ಮಧ್ಯಾಹ್ನ ನಡೆಯಲಿರುವ ವರ್ಚುವಲ್ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಹಿರಿಯ ನಾಯಕ ಗುಲಾಂನಬಿ ಆಜಾದ್ ರಾಜೀನಾಮೆ ನೀಡಿ ರಾಹುಲ್‌ಗಾಂಧಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಬಗ್ಗೆಯೂ ಚರ್ಚೆ ನಡೆಸಿ ಅಧ್ಯಕ್ಷ ಚುನಾವಣೆಗೆ ದಿನಾಂಕ ನಿಗದಿಪಡಿಸುವ ನಿರೀಕ್ಷೆ ಇದೆ.ಗಾಂಧಿ ಕುಟುಂಬದ ಹಿಡಿತ ಅಭಾದಿತಈ ಎಲ್ಲ ವಿದ್ಯಮಾನಗಳ ನಡುವೆ ನೂರಾರು ವರ್ಷಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದಹಿಡಿತ ಮುಂದುವರೆದಿದೆ.
ಗಾಂಧಿ ಕುಟುಂಬಕ್ಕೆ ನಿಷ್ಠರಾದವರನ್ನೇ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಸಾಧ್ಯತೆಗಳು ಬಲವಾಗಿವೆ.ಕಾಂಗ್ರೆಸ್‌ನ ಜಿ-೨೩ ಗುಂಪಿನ ನಾಯಕರು ಈ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದರು. ಕಪಿಲ್‌ಸಿಬಲ್,ಗುಲಾಂನಬಿ ಆಜಾದ್ ಸೇರಿದಂತೆ ಇನ್ನಿತರ ನಾಯಕರು ಕುಟುಂಬ ರಾಜಕಾರಣಕ್ಕೆ ಬೇಸತ್ತು ಪಕ್ಷದಿಂದ ಹೊರ ಹೋಗಿದ್ದಾರೆ.ಜವಹರಲಾಲ್ ನೆಹರು ಪ್ರಧಾನಿಯಾದಾಗಿನಿಂದ ಇಂದಿರಾಗಾಂಧಿ, ರಾಜೀವ್‌ಗಾಂಧಿ ಪ್ರಧಾನಮಂತ್ರಿಗಳಾಗಿದ್ದಾರೆ.
ಈಗಲೂ ಕಾಂಗ್ರೆಸ್ ಪಕ್ಷ ಹಲವು ರಾಜ್ಯಗಳಲ್ಲಿ ಹೀನಾಯ ಸೋಲನುಭವಿಸಿದ್ದರೂ ಪಕ್ಷದಲ್ಲಿ ಗಾಂಧಿ ಕುಟುಂಬದ ಹಿಡಿತ ನಿರಂತರವಾಗಿ ನಡೆಯುತ್ತಿದೆ. ಇದು ಪಕ್ಷದಲ್ಲಿನ ಹಿರಿಯ ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೂ ಕಾರಣವಾಗಿದೆ.ಈ ಎಲ್ಲ ಅಂಶಗಳನ್ನು ಅರಿತಿರುವ ಸೋನಿಯಾಗಾಂಧಿ, ಈ ಬಾರಿ ಕುಟುಂಬ ಸದಸ್ಯರನ್ನೊರತುಪಡಿಸಿ ಬೇರೊಬ್ಬರಿಗೆ ಅಧ್ಯಕ್ಷ ಸ್ಥಾನ ನೀಡುವ ಚಿಂತನೆ ನಡೆದಿದೆ.
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೊ ಯಾತ್ರೆ ಕೈಗೊಳ್ಳುತ್ತಿರುವ ಸಂದರ್ಭದಲ್ಲಿ ಪಕ್ಷದಲ್ಲಿ ಇನ್ನಷ್ಟು ನಾಯಕರ ರಾಜೀನಾಮೆ ಪರ್ವ ತಡೆಗಟ್ಟಿ ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯುವ ಕುರಿತು ಸೋನಿಯಾಗಾಂಧಿ ನಿರ್ಧಾರ ಕೈಗೊಳ್ಳಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ.