
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ( ಮಾರ್ಚ್ 17 ) ಸ್ಪೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನ ಚೌಡಯ್ಯ ಸ್ಮಾರಕ ಸಭಾಭವನದಲ್ಲಿ ನಡೆದ ಬ್ರಹ್ಮರ್ಷಿ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಕನ್ನಡ , ಸಂಸ್ಕ್ರತಿ ಹಾಗೂ ಇಂಧನ ಸಚಿವ ವಿ ಸುನೀಲ್ ಕುಮಾರ್ , ಪುನೀತ್ ದಿನಾಚರಣೆಯನ್ನು ಸ್ಫೂರ್ತಿ ದಿನವಾಗಿ ಆಚರಣೆ ಮಾಡಬೇಕೆಂಬುದು ಸೇರಿದಂತೆ ಮಾಡಿದ ಮನವಿಗಳಿಗೆ ಸ್ಪಂದಿಸಿದ ಅವರು ಈ ಭರವಸೆ ನೀಡಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರು ಅಕಾಲಿಕವಾಗಿ ನಮ್ಮನ್ನು ಅಗಲಿದ್ದಾರೆ. ವೈಯಕ್ತಿಕವಾಗಿ ನನಗೆ ಅತ್ಯಂತ ಪ್ರೀತಿಪಾತ್ರ ವ್ಯಕ್ತಿಯಾಗಿದ್ದರು.
ನಾಡಿನ ಕೋಟ್ಯಂತರ ಯುವಕರಿಗೆ ಅವರು ಸ್ಪೂರ್ತಿಯಾಗಿದ್ದರು.
ಈ ಹಿನ್ನೆಲೆಯಲ್ಲಿ ಪುನೀತ್ ಜನ್ಮದಿನವನ್ನು ಸ್ಫೂರ್ತಿ ದಿನ ಎಂದು ಸರಕಾರದ ವತಿಯಿಂದಲೇ ಆಚರಣೆ ಮಾಡಲಾಗುವುದು ಎಂದು ಹೇಳಿದರು.