ಅಪರಾಧ
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ: ಶಿಕ್ಷಕನನ್ನು ಬಂಧಿಸಿದ ಪೊಲೀಸರು

ಶಿರಸಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಸುರೇಶ ಹೆಗಡೆ(53) ಬಂಧಿತ ಆರೋಪಿ ಆರೋಪಿ ಎಂದು ತಿಳಿದುಬಂದಿದೆ. ಈತ ಹಲವು ದಿನಗಳಿಂದ ವಿದ್ಯಾರ್ಥಿನಿಗೆ ಲೈಂಗಿಕವಾಗಿ ಕಿರುಕುಳ ನೀಡುತ್ತಿದ್ದ ಬಗ್ಗೆ ಶಿರಸಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪಾಲಕರು ಶಿಕ್ಷಕನ ವಿರುದ್ಧ ದೂರನ್ನು ನೀಡಿದ್ದರು.
ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಡಿ ಎಸ್ ಪಿ ರವಿ ನಾಯ್ಕ, ಸಿಪಿಐ ರಾಮಚಂದ್ರ ನಾಯ್ಕ ಮಾರ್ಗದರ್ಶನದಲ್ಲಿ ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.