ಅಪರಾಧಪೊಲೀಸ್ಬೆಂಗಳೂರುರಾಜಕೀಯರಾಜ್ಯ

ಅಮಾನತುಗೊಂಡಿದ್ದ ಇನ್ಸ್ಪೆಕ್ಟರ್ ನಂದೀಶ್ ಸಾವಿನ ತನಿಖೆಗೆ ಬಿ.ಕೆ ಹರಿಪ್ರಸಾದ್ ಆಗ್ರಹ

ಬೆಂಗಳೂರು: ಕೆ.ಆರ್ ಪುರಂ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂದೀಶ್ ಸಾವು ಪ್ರಕರಣದ ಬಗ್ಗೆ ತನಿಖೆ ಮಾಡಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಆಗ್ರಹಿಸಿದ್ದಾರೆ.
ತಡರಾತ್ರಿಯವರೆಗೆ ಪಬ್ ತೆರೆಯಲು ಅವಕಾಶ ಕೊಟ್ಟ ಕಾರಣಕ್ಕಾಗಿ ಅಮಾನತುಗೊಂಡಿದ್ದ ಪೊಲೀಸ್ ಇನ್ಸ್ಪೆಕ್ಟರ್ ನಂದೀಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಆದರೆ ಈ ಸಾವಿನ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಇನ್ಸ್ಪೆಕ್ಟರ್ ನಂದೀಶ್ ಸಾವಿನ ಪ್ರಕರಣ ತನಿಖೆ ಆಗಬೇಕು. ಒಂದು ಬಾರ್ ವಿಚಾರಕ್ಕೆ ಅಮಾನತು ಮಾಡುವಷ್ಟೇ ನಡೆದಿಲ್ಲ. ಇದರ ಹಿಂದೆ ಇನ್ನೂ ಬೇರೇನೋ ವಿಚಾರ ಇದ್ದಂತೆ ಇದೆ. ನಾನು ಮೊದಲೇ ಹೇಳಿದ್ದೆ, ಒಂದು ಪೋಸ್ಟಿಂಗ್ ಗೆ 70 ಲಕ್ಷದಿಂದ 2 ಕೋಟಿ ತನಕ ಹಣದ ಬೇಡಿಕೆ ವಿಚಾರ ಇದೆ. ಇದು ಬಿಜೆಪಿಯ ಸಂಸ್ಕೃತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಂದೀಶ್ ಅಮಾನತಿನ ಹಿಂದೆ ಕೇವಲ ಪಬ್ ವಿಚಾರ ಅಷ್ಟೇ ಇದ್ದಂತೆ ಇಲ್ಲ, ಅದಕ್ಕಿಂತ ಹೆಚ್ಚಿನದು ಬೇರೆನೋ ಇದೆ. ಹೀಗಾಗಿ ಅವರ ಸಾವಿನ ತನಿಖೆ ಆಗಲೇಬೇಕು ಎಂದು ಬಿಕೆ ಹರಿಪ್ರಸಾದ್ ಒತ್ತಾಯಿಸಿದ್ದಾರೆ.

ಮೂಲತಃ ಮೈಸೂರಿನ ನಂದೀಶ್‌ ಇತ್ತೀಚೆಗೆ ಪಬ್ ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ಅಮಾನತುಗೊಂಡಿದ್ದರು. ಅಮಾನತುಗೊಂಡಿದ್ದ ಸರ್ಕಲ್ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಗುರುವಾರ ಸಾವನ್ನಪ್ಪಿದ್ದಾರೆ. ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ಇದೇ ವಿಚಾರವಾಗಿ ಶುಕ್ರವಾರ ಮಾತನಾಡಿದ್ದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ನಂದೀಶ್ ಸಾವು ಹೃದಯಾಘಾತ ಮಾತ್ರ ಕಾರಣವಲ್ಲ, ಬದಲಾಗಿ ಇದೊಂದು ಕೊಲೆ ಎಂಬ ಗಂಭೀರ ಆರೋಪವನ್ನು ಮಾಡಿದ್ದರು.

ಎಚ್ ಡಿ ಕೆ ಏನಂದಿದ್ರು?
ಅಮಾನತುಗೊಂಡಿದ್ದ ಇನ್ಸ್ಪೆಕ್ಟರ್ ನಂದೀಶ್ ಸಾವು ಹೃದಯಾಘಾತದಿಂದ ಅಲ್ಲ,‌ ಬದಲಾಗಿ ಇದೊಂದು ಕೊಲೆ ಎಂದು ಮಾಜಿ‌ ಸಿಎಂ ಎಚ್ ಡಿ ಕುಮಾರಸ್ವಾಮಿ‌ ಆರೋಪ ಮಾಡಿದರು. ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಹಿರಿಯ ಅಧಿಕಾರಿಗಳ ಉದ್ಧಟತನಕ್ಕೆ ಕಡಿವಾಣ ಹಾಕಬೇಕು. ಈ ಪ್ರಕರಣವನ್ನು ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ತನಿಖೆ ಮಾಡಿಸಬೇಕು ಎಂದು ಒತ್ತಾಯಿಸಿದ್ದರು

ಸರ್ಕಾರ ಇದನ್ನು ಲಘುವಾಗಿ ಪರಿಗಣಿಸಬಾರದು. ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದರು. ಮೂಲತಃ ಮೈಸೂರಿನ ನಂದೀಶ್‌ ಇತ್ತೀಚೆಗೆ ಪಬ್ ವೊಂದು ಅವಧಿ ಮೀರಿ ನಡೆಸಲು ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ಅಮಾನತುಗೊಂಡಿದ್ದರು. ಅಮಾನತುಗೊಂಡಿದ್ದ ಇನ್ಸ್‌ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಇದುಉತ್ತರ ಭಾರತದ ಅಧಿಕಾರಿಗಳ ದರ್ಪದಿಂದ ಹಾಗೂ ಸರ್ಕಾರದಿಂದಲೇ ಆಗಿರುವ ಕಗ್ಗೊಲೆಯೇ ಹೊರತು ಬರೀ ಹೃದಯಾಘಾತ ಅಲ್ಲ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದರು.
ಈ ಸಾವಿಗೆ ಬಿಜೆಪಿ ಹೈಕಮಾಂಡ್ ಕೃಪಾಕಟಾಕ್ಷ ಇರುವ, ಅದರಲ್ಲೂ ಉತ್ತರ ಭಾರತ ಮೂಲದ ಹಿರಿಯ ಅಧಿಕಾರಿಗಳ ಉದ್ದತಟನ, ಕಿರುಕುಳ, ಸರ್ಕಾರದ ನಡವಳಿಕೆ, ಕಾಸಿಗಾಗಿ ಹುದ್ದೆ ಕೊಡುತ್ತಿರುವುದೇ ಕಾರಣ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.
ರಾಜ್ಯದಲ್ಲಿ ಒಂದು ದುರ್ಘಟನೆ ನಡೆದಿದೆ. ಪೊಲೀಸ್ ಅಧಿಕಾರಿಯೊಬ್ಬರು ಹೃದಯಾಘಾತದಿಂದ ತೀರಿಕೊಂಡರು. ಅಧಿಕಾರಿ ನಂದೀಶ್ ಅವರು ಹೃದಯಾಘಾತಕ್ಕೆ ಬಲಿಯಾಗಲು ಕಾರಣ ಏನು ಅನ್ನೋದು ನನ್ನ ಪ್ರಶ್ನೆ. ಅವರು ಮಾನಸಿಕ ಒತ್ತಡಕ್ಕೆ ಒಳಗಾಗಿ ಹೀಗೆ ಆಗಿದೆ ಅಂತ ಅವರ ಧರ್ಮಪತ್ನಿ ಅವರೇ ಹೇಳಿದ್ದಾರೆ. ಕೆಲಸ ಬೇಡ ಪತಿಯನ್ನು ತಂದುಕೊಡಿ ಎಂದು ಕಣ್ಣೀರು ಹಾಕಿದ್ದಾರೆ. ಇದಕ್ಕೆ ಸರಕಾರ ಉತ್ತರ ಕೊಡಬೇಕು ಎಂದು ಅವರು ಆಗ್ರಹಿಸಿದರು.

Related Articles

Leave a Reply

Your email address will not be published. Required fields are marked *

Back to top button