ಅರೆಬಿಕ್ ಶಾಲೆ ನಿಯಮ ಉಲ್ಲಂಘನೆ ವರದಿಗೆ ಸಚಿವರ ಸೂಚನೆ

ರಾಜ್ಯದಲ್ಲಿರುವ ಅರೆಬಿಕ್ ಶಾಲೆಗಳಿಂದ ಶಿಕ್ಷಣ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ಸಮಗ್ರ ವರದಿ ನೀಡುವಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಜ್ಯದಲ್ಲಿರುವ ಸುಮಾರು ೨೦೦ ಅರೆಬ್ಬಿಕ್ ಶಾಲೆಗಳು ಶಿಕ್ಷಣ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಶಾಲೆಗಳ ಸ್ಥಿತಿಗತಿ ಕುರಿತು ಶೀಘ್ರವೇ ಸಮಗ್ರ ವರದಿ ಸಲ್ಲಿಸುವಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅಧಿಕಾರಿಗಳಿಗೆ ತಾಖೀತು ಮಾಡಿದ್ದಾರೆ.
ಅರೆಬಿಕ್ ಶಾಲೆಗಳನ್ನು ನಿಯಮಾನುಸಾರವಾಗಿ ನಡೆಸುತ್ತಿಲ್ಲ. ಭಾಷೆ ಮತ್ತು ವಿಜ್ಞಾನದ ಕಲಿಕೆಯೂ ಸಮರ್ಪಕ ರೀತಿಯಲ್ಲಿ ಇಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ವರದಿ ನೀಡುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಶಿಕ್ಷಣ ಸಚಿವ ನಾಗೇಶ್ ಸುದ್ದಿಗಾರರೊಂದಿಗೆ ಮಾತನಾಡುತ್ತ ಹೇಳಿದರು.ಕೆಲವೇ ಶಾಲೆಗಳು ಶಿಕ್ಷಣ ಇಲಾಖೆ ಸೂಚಿಸಿರುವ ಪಠ್ಯಕ್ರಮ ಅನುಸರಿಸುತ್ತಿವೆ.
ಆದರೆ, ಬಹುತೇಕ ಶಾಲೆಗಳು ನಿಯಮ ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಹೇಳಿದ್ದೇನೆ ಎಂದರು.