ರಾಜ್ಯ

ಅ. ಅಂತ್ಯಕ್ಕೆ ನಮ್ಮ ಕ್ಲಿನಿಕ್ ಆರಂಭ

ರಾಜ್ಯದಲ್ಲಿ ಸಮಗ್ರ ಆರೋಗ್ಯ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ೪೩೮ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲು ಮುಂದಾಗಿದ್ದು, ಅಕ್ಟೋಬರ್ ಅಂತ್ಯದ ವೇಳೆಗೆ ಇವುಗಳ ಕಾರ್ಯಾರಂಭ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ವಿಧಾನಪರಿಷತ್‌ನಲ್ಲಿಂದು ಹೇಳಿದರು.

೪೩೮ ನಮ್ಮ ಕ್ಲಿನಿಕ್‌ಗಳನ್ನು ೧೫೫.೭೭ ಕೋಟಿ ರೂ. ವೆಚ್ಚದಲ್ಲಿ ಆರಂಭಿಸಲಾಗುತ್ತಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ೨೪೩ ಮತ್ತು ಇತರೆ ಜಿಲ್ಲೆಗಳಲ್ಲಿ ೧೯೫ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗುವುದು ಎಂದರು.ನಮ್ಮ ಕ್ಲಿನಿಕ್‌ಗಳಲ್ಲಿ ಗರ್ಭಿಣಿ, ಬಾಣಂತಿ, ಆರೋಗ್ಯ ಸೇವೆ, ನವಜಾತ ಶಿಶುಗಳ ಆರೈಕೆ, ಮಕ್ಕಳು, ಹದಿಹರೆಯದ ಸಮಸ್ಯೆಗಳು, ಕುಟುಂಬ ಕ ಲ್ಯಾಣ ಯೋಜನೆ ಜಾರಿ ಸೇರಿದಂತೆ ೧೨ ಸೇವೆಗಳನ್ನು ಸೇರ್ಪಡೆ ಮಾಡಿ, ಸಮಗ್ರ ಆರೋಗ್ಯ ಸೇವೆಯನ್ನು ಒದಗಿಸಲಾಗುವುದು ಎಂದು ಹೇಳಿದರು.

ಪ್ರಶ್ನೋತ್ತರ ಅವಧಿಯಲ್ಲಿ ಸಿ.ಎನ್. ನಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ನಗರ ಕೊಳಗೇರಿ ಮತ್ತು ಕೊಳಗೇರಿ ಸ್ವರೂಪವಿರುವ ಪ್ರದೇಶಗಳ ದುರ್ಬಲ ವರ್ಗದ ಜನರಿಗೆ ಆರೋಗ್ಯ ಸೇವೆ ಒದಗಿಸಬೇಕು ಎಂಬುದು ಸರ್ಕಾರದ ಉದ್ಧೇಶ.

ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ೪೩೮ ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲಾಗುವುದು ಎಂದು ಹೇಳಿದರು.ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತಿ ನಮ್ಮ ಕ್ಲಿನಿಕ್‌ಗೆ ೩೬.೪೫ ಲಕ್ಷ, ಇತರೆ ಜಿಲ್ಲೆಗಳಲ್ಲಿ ಪ್ರತಿ ಕ್ಲಿನಿಕ್‌ಗೆ ೩೪.೪೬ ಲಕ್ಷ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ.

ಪ್ರತಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿ, ಶುಶ್ರೂಷಕರು, ಪ್ರಯೋಗಾಲಯ ತಂತ್ರಜ್ಞರು, ಕಿರಿಯ ದರ್ಜೆ ಸಹಾಯಕರು, ಡಿ ಗ್ರೂಪ್ ಸಿಬ್ಬಂದಿ ತಲಾ ಒಬ್ಬರು ಇರಲಿದ್ದಾರೆ ಎಂದರು.೨ ಸಾವಿರ ವೈದ್ಯರ ನೇಮಕರಾಜ್ಯದಲ್ಲಿ ಈಗಾಗಲೇ ೨ ಸಾವಿರ ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದೆ.

ಹೀಗಾಗಿ ನಮ್ಮ ಕ್ಲಿನಿಕ್‌ಗೆ ವೈದ್ಯರ ನೇಮಕ ಅಭಾವ ಎದುರಾಗುವುದಿಲ್ಲ ಎಂದು ಅವರು ತಿಳಿಸಿದರು.ನಮ್ಮ ಕ್ಲಿನಿಕ್‌ಗೆ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ವೈದ್ಯರು ಮತ್ತು ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವುದರಿಂದ ಎಲ್ಲಿಯೂ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ದಿನದ ೨೪ ಗಂಟೆಯೂ ಕಾರ್ಯನಿರ್ವಹಣೆಗೆ ಅನುವುರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ದಿನದ ೨೪ ಗಂಟೆ ಕಾರ್ಯನಿರ್ವಹಿಸಲು ಅನುವಾಗುವಂತೆ ಸಜ್ಜುಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ವಿಧಾನಪರಿಷತ್‌ನಲ್ಲಿಂದು ತಿಳಿಸಿದರು.ಅಬ್ದುಲ್ ಜಬ್ಬರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ೧೦೦ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಗೇರಿಸಲಾಗುತ್ತಿದೆ.

ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಜ್ಞರ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು. ೪ ಸಾವಿರ ವೈದ್ಯರನ್ನು ಇದುವರೆಗೂ ನೇಮಕ ಮಾಡಿಕೊಳ್ಳಲಾಗಿದೆ. ಅದರಲ್ಲಿ ೩ ಸಾವಿರ ಎಂಬಿಬಿಎಸ್ ವೈದ್ಯರು, ೧ ಸಾವಿರ ತಜ್ಞ ವೈದ್ಯರಿದ್ದಾರೆ ಎಂದು ಹೇಳಿದರು.

ರಾಜ್ಯದ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಡಯಾಲಿಸೀಸ್ ರೋಗಿಗಳಿಗೆ ಅನುಕೂಲವಾಗುವಂತೆ ಯಂತ್ರಗಳನ್ನು ಅಳವಡಿಸಲಾಗಿದೆ. ೩೦ ಸಾವಿರ ಸೈಕಲ್ ಇದ್ದದ್ದನ್ನು ೬೦ ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. ಜತೆಗೆ ಸ್ಕ್ಯಾನಿಂಗ್ ಯಂತ್ರಗಳನ್ನು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗಿದೆ ಎಂದು ಅವರು ಹೇಳಿದರು.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button