ಆಂಧ್ರದಿಂದ ಬೆಂಗಳೂರಿಗೆ ಗಾಂಜಾ ತಂದು ಮಾರುತ್ತಿದ್ದ ಜಾಲ ಪತ್ತೆ, ಐವರು ಸೆರೆ
Andhra marijuana Five arrested

ಬ್ಯಾಗ್ ಕೆಳಭಾಗದಲ್ಲಿ ಗಾಂಜಾ ಪಾಕೆಟ್‍ಗಳನ್ನು ಇಟ್ಟು, ಮೇಲ್ಭಾಗದಲ್ಲಿ ಸೀರೆಗಳನ್ನು ತುಂಬಿಕೊಂಡು ಆಂಧ್ರಪ್ರದೇಶದಿಂದ ನಗರಕ್ಕೆ ಬಂದು ಮಾರಾಟ ಮಾಡುತ್ತಿದ್ದ ಜಾಲವನ್ನು ಯಶವಂತಪುರ ಠಾಣೆ ಪೊಲೀಸರು ಪತ್ತೆ ಹಚ್ಚಿ ಮೂವರು ಅಂತಾರಾಜ್ಯ ಆರೋಪಿಗಳು ಸೇರಿದಂತೆ 5 ಮಂದಿಯನ್ನು ಬಂಧಿಸಿದ್ದಾರೆ.ಬಂತರಿಂದ 53.05 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಯರಾಮ್ ಕಾಲೋನಿಯಲ್ಲಿ ವ್ಯಕ್ತಿಯೊಬ್ಬ ಮಾದಕವಸ್ತು ಗಾಂಜಾವನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ತಕ್ಷಣ ಸಬ್‍ಇನ್‍ಸ್ಪೆಕ್ಟರ್ ಅವರು ತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಹೋಗಿ ಆರೋಪಿಯನ್ನು ಬಂಸಿ, 1 ಕೆಜಿ 590 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ವಿಚಾರಣೆ ವೇಳೆ ಈತ ನೀಡಿದ ಹೇಳಿಕೆ ಮೇರೆಗೆ ಕಾರ್ಯಾಚರಣೆ ಮುಂದುವರೆಸಿ ಕೆನರಾ ಯೂನಿಯನ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರಪ್ರದೇಶದ ತಿರುಪತಿ ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದು 7 ಕೆಜಿ 50 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಈತನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ನೀಡಿದ ಮಾಹಿತಿ ಮೇರೆಗೆ ಆಂಧ್ರಪ್ರದೇಶದ ವಿಶಾಖಪಟ್ಟಣದ ಕಾಕಿನಾಡದ ತನ್ನ ಸ್ನೇಹಿತನಿಂದ ಗಾಂಜಾವನ್ನು ಕಡಿಮೆ ಬೆಲೆಗೆ ಖರೀದಿಸಿ ತಂದು ಮಾರಾಟ ಮಾಡುತ್ತಿದುದ್ದಾಗಿ ತಿಳಿಸಿದ್ದಾರೆ. ಈತನ ಮಾಹಿತಿ ಮೇರೆಗೆ ಈ ಪ್ರಕರಣದಲ್ಲಿ ಭಾಗಿಯಾಗಿರುವ ಮೊದಲ ಮತ್ತು 2ನೇ ಆರೋಪಿಯಿಂದ 40 ಕೆಜಿ 700 ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಇನ್ನಿಬ್ಬರು ಆರೋಪಿಗಳಿಂದ 47.75 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಈ ಮೂವರ ಮಾಹಿತಿ ಮೇರೆಗೆ ಮತ್ತೆರಡು ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿ 5.3 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟಾರೆ ನಾಲ್ಕು ಪ್ರಕರಣಗಳಲ್ಲಿ ಸ್ಥಳೀಯ ಇಬ್ಬರು ಆರೋಪಿಗಳೂ ಹಾಗೂ 3 ಅಂತಾರಾಜ್ಯ ಆರೋಪಿಗಳನ್ನು ಬಂಧಿಸಲಾಗಿದೆ.
ಮೂವರು ಆರೋಪಿಗಳು ಆಂಧ್ರಪ್ರದೇಶದವರಾಗಿದ್ದು, ಆಂಧ್ರದ ಕಾಕಿನಾಡ ಮೂಲದ ವ್ಯಕ್ತಿಯೊಬ್ಬನಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ಅದನ್ನು ಚಿಕ್ಕ ಚಿಕ್ಕ ಪಾಕ್ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದುದ್ದಾಗಿ ಮತ್ತು ಆಂಧ್ರದಿಂದ ಗಾಂಜಾ ತರುವಾಗ ಯಾರಿಗೂ ಅನುಮಾನ ಬಾರದಂತೆ ಪ್ಯಾಕ್‍ಗಳನ್ನು ಮಾಡಿ ದೊಡ್ಡ ಬ್ಯಾಗ್‍ನಲ್ಲಿ ಕೆಳಭಾಗದಲ್ಲಿಟ್ಟು ಮೇಲ್ಭಾಗದಲ್ಲಿ ಸೀರೆಗಳನ್ನು ತುಂಬಿಕೊಂಡು ಸೀರೆ ಮಾರಾಟ ಮಾಡಲು ಹೋಗುತ್ತಿದ್ದೇವೆ ಎಂದು ತಿಳಿಸಿ ಖಾಸಗಿ ಬಸ್‍ಗಳಲ್ಲಿ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿದುದು ತನಿಖೆಯಿಂದ ತಿಳಿದುಬಂದಿದೆ.
ಯಶವಂತಪುರ ಉಪವಿಭಾಗದ ಎಸಿಪಿ ಅರುಣ್ ನಾಗೇಗೌಡ ಮಾರ್ಗದರ್ಶನದಲ್ಲಿ ಇನ್‍ಸ್ಪೆಕ್ಟರ್ ಸುರೇಶ್ ಅವರ ನೇತೃತ್ವದ ಸಿಬ್ಬಂದಿ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.