
ಆಂಧ್ರದ ಏಲೂರು ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, 12 ಮಂದಿಗೆ ಗಾಯಗೊಂಡಿದ್ದಾರೆ.ಪಾಲಿಮರ್ ಪವರ್ ತಯಾರಿಸುವ ಸ್ಥಾವರದಲ್ಲಿ ರಾತ್ರಿ ಪಾಳಯದಲ್ಲಿ ಕಾರ್ಮಿಮಿಕರು ಕೆಲಸ ಮಾಡುವಾಗ ತಡರಾತ್ರಿ ರಿಯಾಕ್ಟನರ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ ಗಾಯಾಳುಗಳನ್ನು ವಿಜಯವಾಡದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂದು ಏಲೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ದೇವ್ ಅವರು ಹೇಳಿದರು.ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಏತನ್ಮಧ್ಯೆ, ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಕ್ಕೆ ರೂ 25 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ.ತೀವ್ರವಾಗಿ ಗಾಯಗೊಂಡವರಿಗೆ ತಲಾ ಐದು ಲಕ್ಷ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 2 ಲಕ್ಷ ರೂ. ಪ್ರಕಟಿಸಲಾಗಿದೆ. ಗಟನೆ ಬಗ್ಗೆ ತನಿಖೆ ಅರಂಭವಾಗಿದ್ದು ಕಾರ್ಖಾನೆ ಹಲವು ಭಾಗ ಸುಟ್ಟುಹೊಗಿದೆ,ಸ್ಥಳೀಯರು ಗಟಬೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.