ರಾಜ್ಯ
ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ಎತ್ತಿ ಹಿಡಿದ ಸುಪ್ರೀಂಕೋರ್ಟ್!

ಆರ್ಥಿಕವಾಗಿ ಹಿಂಜರಿದ ಮೇಲ್ವರ್ಗದವರಿಗೆ ಶೇ.10ರಷ್ಟು ನೀಡಲಾಗಿರುವ ಮೀಸಲಾತಿಯನ್ನು ಐವರು ನ್ಯಾಯಮೂರ್ತಿಗಳ ಸುಪ್ರೀಂಕೋರ್ಟ್ ಎತ್ತಿ ಹಿಡಿಯುವ ಮೂಲಕ ಮಹತ್ವದ ಆದೇಶ ಹೊರಡಿಸಿದೆ.
ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ, ಶೇ.10ರಷ್ಟು ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲು ಮೀಡುವ ಕೇಂದ್ರ ಸರಕಾರದ ಆದೇಶವನ್ನು ಎತ್ತಿ ಹಿಡಿದಿದೆ.
4-1ರ ಅನುಪಾತದಲ್ಲಿ ನ್ಯಾಯಮೂರ್ತಿಗಳು ತೀರ್ಪು ಪ್ರಕಟಿಸಿದ್ದಾರೆ.ಶೇ.10ರಷ್ಟು ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲು ನೀಡುವುದರಿಂದ ಕಾನೂನು ಉಲ್ಲಂಘನೆ ಆಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.