ರಾಜ್ಯ

ಆಲಮಟ್ಟಿ ಡ್ಯಾಂನಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ: ವಿದ್ಯುತ್‌ ಉತ್ಪಾದನೆಯೂ ಹೆಚ್ಚಳ..!

ಆಲಮಟ್ಟಿ (ವಿಜಯಪುರ): ಮಹಾರಾಷ್ಟ್ರದ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಡ್ಯಾಂಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಜಲಾಶಯ ಶೇ.95ರಷ್ಟು ಭರ್ತಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದಿಂದ 1 ಲಕ್ಷ ಕ್ಯುಸೆಕ್‌ ನೀರನ್ನು ನದಿ ಪಾತ್ರಕ್ಕೆ ಹರಿಸಲಾಗುತ್ತಿದೆ.

ಆಲಮಟ್ಟಿ ಜಲಾಶಯದ ಬಲ ಬದಿಯಲ್ಲಿರುವ ವಿದ್ಯುದಾಗಾರದ ಮೂಲಕ 45 ಸಾವಿರ ಕ್ಯುಸೆಕ್‌ ಹಾಗೂ ಜಲಾಶಯದ 26 ಗೇಟ್‌ಗಳ ಪೈಕಿ 24 ಗೇಟ್‌ಗಳಿಂದ 55 ಸಾವಿರ ಕ್ಯುಸೆಕ್‌ ಸೇರಿ ಒಟ್ಟು 1 ಲಕ್ಷ ಕ್ಯುಸೆಕ್‌ ನೀರನ್ನು ನದಿ ಪಾತ್ರಕ್ಕೆ ಹರಿಬಿಡಲಾಗುತ್ತಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ರಾಜ್ಯದ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರದ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಮಳೆ ಸೋಮವಾರವೂ ಮುಂದುವರೆದಿದ್ದು ಆಲಮಟ್ಟಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಮತ್ತಷ್ಟೂ ಏರಿಕೆ ಕಾಣುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ ಆಲಮಟ್ಟಿ ಜಲಾಶಯದಿಂದ ನದಿ ಪಾತ್ರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ.

ಗರಿಷ್ಠ 519.60 ಮೀಟರ್‌ ಎತ್ತರದಲ್ಲಿ 123.081 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯದ ಜಲಾಶಯದಲ್ಲಿ ಸೋಮವಾರ ಸಂಜೆ 519.31 ಮೀಟರ್‌ ಎತ್ತರದಲ್ಲಿ 118.052 ಟಿಎಂಸಿ ನೀರು ಸಂಗ್ರಹವಾಗಿತ್ತು. ಒಳ ಹರಿವಿನ ಪ್ರಮಾಣ 74,977 ಕ್ಯುಸೆಕ್‌ ಇದ್ದು, 1 ಲಕ್ಷ ಕ್ಯುಸೆಕ್‌ ನೀರನ್ನು ನದಿ ಪಾತ್ರಕ್ಕೆ ಹರಿಬಿಡಲಾಗುತ್ತಿತ್ತು.

ಸೋಮವಾರ ಬೆಳಗ್ಗೆ 37 ಸಾವಿರ ಕ್ಯುಸೆಕ್‌ ಒಳ ಹರಿವು ಇದ್ದಾಗ ಹೊರ ಹರಿವಿನ ಪ್ರಮಾಣ 6 ಸಾವಿರ ಕ್ಯುಸೆಕ್‌ ಮಾತ್ರವಿತ್ತು. ಆದರೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಲೇ ಸಾಗಿದ್ದರಿಂದ ಹೊರ ಹರಿವಿನ ಪ್ರಮಾಣವನ್ನು 42.5 ಸಾವಿರ ಕ್ಯುಸೆಕ್‌ ಹೆಚ್ಚಳ ಮಾಡಲಾಗಿತ್ತು. ಆದರೆ ಸಂಜೆ ವೇಳೆ ಹೊರ ಹರಿವಿನ ಪ್ರಮಾಣವನ್ನು 1 ಲಕ್ಷ ಕ್ಯುಸೆಕ್‌ಗೆ ಹೆಚ್ಚಿಸಲಾಯಿತು.

ಕೊಯ್ನಾ ಜಲಾಶಯದಿಂದ ನೀರು ಹೊರಕ್ಕೆ: ರಾಜ್ಯದ ಆಲಮಟ್ಟಿ ಜಲಾಶಯದಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹ.

ವಿದ್ಯುತ್‌ ಉತ್ಪಾದನೆ ಹೆಚ್ಚಳಸೋಮವಾರ ಸಂಜೆ ಇಲ್ಲಿನ ವಿದ್ಯುದಾಗಾರದಿಂದ ಒಟ್ಟು 250 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತಿತ್ತು. 55 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಸಾಮರ್ಥ್ಯದ 5 ಘಟಕ ಹಾಗೂ 15 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಸಾಮರ್ಥ್ಯದ ಒಂದು ಘಟಕ ಸೇರಿ ಒಟ್ಟು 6 ಘಟಕಗಳಿಂದ 290 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಸಾಮರ್ಥ್ಯದ ವಿದ್ಯುದಾಗಾರದಲ್ಲಿ ಎಲ್ಲ 6 ಘಟಕಗಳಿಂದ ಒಟ್ಟು 250 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತಿದೆ.

ಭಾನುವಾರದವರೆಗೂ ಕೇವಲ 61 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡುತ್ತಿದ್ದ ಇಲ್ಲಿನ ವಿದ್ಯುದಾಗಾರದಲ್ಲಿ ಸೋಮವಾರ ಒಳಹರಿವು ಹೆಚ್ಚಳವಾಗಿದ್ದರಿಂದ ವಿದ್ಯುದಾಗಾರದ ಮೂಲಕ ನದಿ ಪಾತ್ರಕ್ಕೆ 45 ಸಾವಿರ ಕ್ಯುಸೆಕ್‌ ನೀರನ್ನು ಹರಿಬಿಟ್ಟಿದ್ದರಿಂದ ವಿದ್ಯುತ್‌ ಉತ್ಪಾದನೆ ಹೆಚ್ಚಳವಾಗಿದೆ ಎಂದು ವಿದ್ಯುದಾಗಾರದ ಮೂಲಗಳು ತಿಳಿಸಿವೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button