ಸಿನಿಮಾ
ಇಡೀ ತಮಿಳುನಾಡಿನಲ್ಲಿ ಅತಿ ಹೆಚ್ಚು ತೆರಿಗೆ ಕಟ್ತಾರೆ ರಜನಿಕಾಂತ್..!

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ತಮಿಳುನಾಡಿನಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವ ವ್ಯಕ್ತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಆದಾಯ ತೆರಿಗೆ ದಿನದ ಪ್ರಯುಕ್ತ ಪುದುಚೇರಿ ಗವರ್ನರ್ ತಮಿಳಿಸೈ ಸೌಂದರರಾಜನ್ ಅವರು ರಜನಿಕಾಂತ್ ಅವರನ್ನು ಗೌರವಿಸಿದ್ದಾರೆ.ಅವರ ಪರವಾಗಿ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.
ಈ ವಿಚಾರವನ್ನು ಈಗ ಸಿನಿಮಾ ಮಾರುಕಟ್ಟೆ ವಿಶ್ಲೇಷಕ ಮನೋಬಾಲಾ ವಿಜಯ್ ಬಾಲಾ ಅವರು ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆಸದ್ಯ ರಜನಿಕಾಂತ್ ನೆಲ್ಸನ್ ಅವರ ನಿರ್ದೇಶನದ ಜೈಲರ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.