ರಾಜ್ಯ
ಇನ್ಮುಂದೆ ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿವೆ ಬಿಎಂಟಿಸಿ ಬಸ್

ಹೊಸ ವರ್ಷ ಆರಂಭದಲ್ಲಿ ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ಮುಂದೆ ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ಬಸ್ ಗಳು ಸಂಚರಿಸಲಿವೆ.
ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಲಾಗಿದ್ದು, ಚಿಕ್ಕಬಳ್ಳಾಪುರ ಜನರ ಬೇಡಿಕೆಗೆ ಸ್ಪಂಧಿಸಿ ಬಿಎಂಟಿಸಿ ಬೋರ್ಡ್ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚರಿಸಲು ಅನುಮತಿ ನೀಡಿದೆ.
ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರಕ್ಕೆ ಮಾತ್ರ ಬಿಎಂಟಿಸಿ ಸೀಮಿತವಾಗಿತ್ತು. ಈಗ ಚಿಕ್ಕಬಳ್ಳಾಪುರಕ್ಕೂ ಬಿಎಂಟಿಸಿ ವಿಸ್ತರಣೆ ಮಾಡಲಾಗಿದೆ.