ರಾಜ್ಯ
ಉತ್ತರಭಾರತದಲ್ಲಿ ಮಳೆ : ಶಾಲೆಗಳಿಗೆ ರಜೆ

ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮುಂದಿನ ಮೂರು ದಿನಗಳ ಕಾಲ ತೀವ್ರ ಮಳೆಯಾಗುವ ನಿರೀಕ್ಷೆ ಹಿನ್ನೆಲೆ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ ಇಂದು ಗರಿಷ್ಠ ತೀವ್ರತೆಯೊಂದಿಗೆ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮುಂದಿನ ಮೂರು ದಿನಗಳ ಕಾಲ ತೀವ್ರ ಮಳೆಯಾಗುವ ನಿರೀಕ್ಷೆಯಿದೆ.
ಎರಡೂ ರಾಜ್ಯಗಳು ಮುಂದಿನ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಆದರೆ ಉತ್ತರಾಖಂಡದ ಕೆಲವು ಭಾಗಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ತೀವ್ರ ಮಳೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ೧ ರಿಂದ ೧೨ ನೇ ತರಗತಿಯವರೆಗಿನ ಎಲ್ಲಾ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನು ಒಂದು ದಿನದ ಮಟ್ಟಿಗೆ ಮುಚ್ಚುವಂತೆ ತೆಹ್ರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.