
ಹೊಸಪೇಟೆಯ ಸ್ವತಂತ್ರ ಮೈಕ್ರೋಫಿನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಇದರ ಅಂಗವಾಗಿ ಏ.19 ರಂದು ಬೆಳಿಗ್ಗೆ 10.30 ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಯೋಜಿಸಲಾಗಿದೆ.
20 ರಿಂದ 28 ವರ್ಷದೊಳಗಿನ ಪಿಯುಸಿ, ಐಟಿಐ, ಯಾವುದೇ ಪದವಿ, ಡಿಪ್ಲೋಮಾ ವಿದ್ಯಾರ್ಹತೆ ಹೊಂದಿದ ಪುರುಷರು ಅಭ್ಯರ್ಥಿಗಳು ಮಾತ್ರ ಸಂದರ್ಶನಕ್ಕೆ ಹಾಜರಾಗಬಹುದಾಗಿದ್ದು, ದ್ವಿ-ಚಕ್ರ ವಾಹನ ಲೈಸೆನ್ಸ್ ಮತ್ತು ಪ್ಯಾನ್‌ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರಬೇಕು.
ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳೊಂದಿಗೆ ಆಧಾರ್ ಕಾರ್ಡ್ನ ಪ್ರತಿ, ಬಯೋಡೇಟಾ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 7208063971, 9321943757 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.