ಎಸಿಬಿ ರದ್ದುಗೊಳಿಸಿ ಲೋಕಾಯುಕ್ತ ಮುಂದುವರೆಯಲಿ: ಭಾಸ್ಕರ್ ರಾವ್

ಭ್ರಷ್ಟಾಚಾರ ನಿಗ್ರಹದಳ (ಎಸಿಬಿ)ಯನ್ನ ರದ್ದುಗೊಳಿಸುವಂತೆ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಆಪ್ ಮುಖಂಡ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷರು ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.
ಎಸಿಬಿ ಕಾರ್ಯವೈಖರಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಇತ್ತೀಚಿನ ಹೇಳಿಕೆ ಅನುಮೋದಿಸಿ ಟ್ವೀಟ್ ಮಾಡಿರುವ ಭಾಸ್ಕರ್ ರಾವ್, ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಅವರ ಅಭಿಪ್ರಾಯ 100% ಸತ್ಯವಾಗಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ವನ್ನ ರಚಿಸಿತು ಎಂದು ಆರೋಪಿಸಿದ್ದಾರೆ.
ಭಾರತದಲ್ಲಿ ಎರಡು ಭ್ರಷ್ಟಾಚಾರ ನಿಗ್ರಹ ಸಂಸ್ಥೆಗಳನ್ನು ಹೊಂದಿರುವ ರಾಜ್ಯ ಕರ್ನಾಟಕ ಮಾತ್ರ. ಆದ್ದರಿಂದ ಎಸಿಬಿಯನ್ನು ಮುಚ್ಚಬೇಕು ಮತ್ತು ಬಲವಾದ ಸ್ವತಂತ್ರ ಲೋಕಾಯುಕ್ತ ಕಾರ್ಯ ನಿರ್ವಹಿಸಬೇಕು ಎಂದು ಭಾಸ್ಕರ್ ರಾವ್ ತಮ್ಮ ಟ್ವೀಟ್ ನಲ್ಲಿ ಆಗ್ರಹಿಸಿದ್ದಾರೆ.
ಎಸಿಬಿ ಕಾರ್ಯವೈಖರಿಯನ್ನ ಪ್ರಶ್ನಿಸಿ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಇತ್ತೀಚಿಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು.