ಅಪರಾಧ
ಎಸೆಸೆಲ್ಸಿ ಪರೀಕ್ಷೆ ಕೊಠಡಿಯಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಶಿಕ್ಷಕ – ರಾಜ್ಯದಲ್ಲಿ ಆತಂಕಕಾರಿ ಘಟನೆ ವರದಿ

ಹಾವೇರಿ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳು ಬರುವಂತೆ ಮಾಡುತ್ತೇನೆಂದು ವಿದ್ಯಾರ್ಥಿನಿಗೆ ಪರೀಕ್ಷೆ ಕೊಠಡಿಯಲ್ಲಿ ಮುತ್ತುಕೊಟ್ಟ ಶಿಕ್ಷಕಕನ ವಿರುದ್ಧ ಪೊಕ್ಕೋ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಹಾವೇರಿಯ ಶಿಕ್ಷಕ 45 ವರ್ಷದ ಪರಮೇಶ ಐರಣಿ ಎಂಬಾತನ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪೋಕ್ಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿರುವ ಪರಮೇಶ, ಎಸ್‌ಎಸ್‌ಎಲ್‌ಸಿ ಪರೀಕ್ಷಾ
ಕೇಂದ್ರದ ಮೇಲ್ವಿಚಾರಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಪರೀಕ್ಷೆ ಆರಂಭವಾದ ದಿನದಿಂದ ವಿದ್ಯಾರ್ಥಿನಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿ, ನಿನಗೆ ಜಾಸ್ತಿ ಅಂಕ ಕೊಡೇನೆಂದು ಕಿಸ್ಸಿಂಗ್ ಮಾಡಿದ್ದಾನೆ.