
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಸೋಮವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರನ್ನು ಆಸ್ಪತ್ರೆಯ ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಭಾನುವಾರ ಸೀತಾರಾಮನ್ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ದೆಹಲಿಯ ‘ಸದೈವ್ ಅಟಲ್’ಗೆ ತೆರಳಿ ಪುಷ್ಪನಮನ ಸಲ್ಲಿಸಿದ್ದರು.