
ಬೆಂಗಳೂರು: ಕಾರು ಚಾಲಕನ ಅತಿವೇಗ ಹಾಗೂ ಅಜಾಗರೂಕ ಚಾಲನೆಯಿಂದ ಕಾರಿನ ಚಾಲಕ ಸಾವನ್ನಪ್ಪಿದ ಘಟನೆ ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿ ದೇವನಹಳ್ಳಿ ಏರ್ಪೋರ್ಟ್ ರಸ್ತೆ ಬಿಎಸ್ಎಫ್ ಆರ್ಮಿ ಕ್ಯಾಂಪಸ್ ಬಳಿ ಸಂಭವಿಸಿದೆ.
Ka 27C 0471 ನಂಬರಿನ ಕಾರು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ Ka 40 F 1316 ನಂಬರಿನ ಕೆಎಸ್ಆರ್ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಡ್ರೈವರ್ ಲೋಹಿತ್ ಪ್ರಸಾದ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಇಂದು ಮುಂಜಾನೆ 3:15ಕ್ಕೆ ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿ ದೇವನಹಳ್ಳಿ ಏರ್ಪೋರ್ಟ್ ರಸ್ತೆ ಬಿಎಸ್ಎಫ್ ಆರ್ಮಿ ಕ್ಯಾಂಪಸ್ ಬಳಿ ಈ ಭೀಕರ ದುರಂತ ಸಂಭವಿಸಿದೆ.
ಮಂತ್ರಾಲಯಕ್ಕೆ ಹೋಗಿ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿಗೆ ಬೆಂಗಳೂರಿನಿಂದ ಏರ್ಪೋರ್ಟ್ ಕಡೆಗೆ ತೆರಳುತ್ತಿದ್ದ ಕಾರು ರಸ್ತೆ ವಿಭಜಕ ದಾಟಿ ಗುದ್ದಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.
ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರು ಚಾಲಕನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಕಾರು ಚಾಲಕನ ಮೃತದೇಹವನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಯಲಹಂಕ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.