
ವಿಜಯಪುರ ಜಿಲ್ಲೆಯ ವಿಶ್ವವಿಖ್ಯಾತ ಗೋಲುಗುಮ್ಮಟದ 7ನೇ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
23 ವರ್ಷದ ಅಪರಿಚಿತ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಮಾಹಿತಿ ಕಲೆ ಹಾಕಲು ಪೊಲೀಸರು ಮುಂದಾಗಿದ್ದಾರೆ.ಗೋಲುಗುಮ್ಮಟದ ಪಿಸುಗೂಡು ಗ್ಯಾಲರಿಯಿಂದ ಯುವತಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೃತ ಯುವತಿಯ ಶವವನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.ಗೋಲುಗುಮ್ಮಟ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಯುವತಿಯ ಮಾಹಿತಿ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ.