Festivalರಾಜ್ಯಸಂಸ್ಕೃತಿ

ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ಸಂಸ್ಕೃತಿ ನಗರಿ ಮೈಸೂರು ರೆಡಿ!

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ವಿಜಯದಶಮಿಯಂದು ಅಂದ್ರೆ ಇಂದು ನಡೆಯಲಿದೆ. ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯು ಸೇರಿದಂತೆ, ನಾಡಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲು ನಾಡು ಸಜ್ಜಾಗಿದೆ.

ಕೋವಿಡ್‌ನಿಂದಾಗಿ ಎರಡು ವರ್ಷ ಕಳೆಗುಂದಿದ್ದ ಆಚರಣೆಗೆ ಈ ಬಾರಿ ಅದ್ಧೂರಿತನ ಮೇಳೈಸಿದೆ.

ಇಂದು ಮಧ್ಯಾಹ್ನ 2.36 ರಿಂದ 2.50 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೂಜೆ ಸಲ್ಲಿಸುವ ಮೂಲಕ, ಆಕರ್ಷಕ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.

ನಂತರ, ಸಂಜೆ 5.07 ರಿಂದ 5.18 ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಒಳಾವರಣದ ವಿಶೇಷ ವೇದಿಕೆಯಲ್ಲಿ ಗಜರಾಜ ‘ಅಭಿಮನ್ಯು’ ಹೊರಲಿರುವ 750 ಕೆ.ಜಿ ತೂಕದ ಚಿನ್ನದ ಅಂಬಾರಿಯಲ್ಲಿರುವ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಕಾವೇರಿ ಹಾಗೂ ಚೈತ್ರಾ ‘ಕುಮ್ಕಿ’ ಆನೆಗಳಾಗಿ ಅಭಿಮನ್ಯುವಿನ ಜೊತೆ ಸಾಗಲಿವೆ.

ಈ ಸಂದರ್ಭದಲ್ಲಿ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು, ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್‌, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ಕುಮಾರ್‌, ಮೇಯರ್‌ ಶಿವಕುಮಾರ್‌ ಉಪಸ್ಥಿತರಿರಲಿದ್ದಾರೆ.

ನಾಡಿನ ಕಲೆ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ 47 ಸ್ತಬ್ಧಚಿತ್ರಗಳು, 50 ಜನಪದ ಕಲಾತಂಡಗಳು ಸೇರಿದಂತೆ 100ಕ್ಕೂ ಹೆಚ್ಚು ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ. ಅಭಿಮನ್ಯು ಸತತ ಮೂರನೇ ಬಾರಿಗೆ ಚಿನ್ನದ ಅಂಬಾರಿ ಹೊರಲಿದ್ದಾನೆ.

ಇನ್ನು ಸಂಜೆ 7.30ಕ್ಕೆ ಬನ್ನಿಮಂಟಪದಲ್ಲಿ ನಡೆಯುವ ಪಂಜಿನ ಕವಾಯತಿನಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋತ್‌ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಗೌರವ ವಂದನೆ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಹತ್ತು ದಿನಗಳಿಂದ ನಡೆಯುತ್ತಿರುವ ದಸರೆಗೆ ತೆರೆ ಬೀಳಲಿದೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button