ಒತ್ತಡಕ್ಕೆ ಮಣಿದು ಸ್ಪರ್ಧೆ : ಖರ್ಗೆ

ಪಕ್ಷದ ಹಿರಿಯ ನಾಯಕರ ಒತ್ತಾಯದ ಮೇರೆಗೆ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವುದಾಗಿ ಮಲ್ಲಿಕಾರ್ಜುನ ಖರ್ಗೆರವರು ತಿಳಿಸಿದ್ದಾರೆ.ಕಾಂಗ್ರೆಸ್ ಅಧ್ಯಕ್ಷನಾಗಬೇಕೆಂದು ಕನಸು – ಮನಸಿನಲ್ಲೂ ಎಣಿಸಿರಲಿಲ್ಲ.
ಕೂಡಿಬಂದ ಪರಿಸ್ಥಿತಿ ಹಾಗೂ ನಾಯಕರ ಒತ್ತಾಯಕ್ಕೆ ಮಣಿದು ಸ್ಪರ್ಧಿಸುವುದು ಅನಿವಾರ್ಯವಾಗಿತ್ತು ಎಂದು ಹೇಳಿದ್ದಾರೆ.ಅ. ೧೭ ರಂದು ನಡೆಯುವ ಚುನಾವಣೆಯಲ್ಲಿ ಖರ್ಗೆ ಹಾಗೂ ಮಾಜಿ ಸಚಿವ ಶಶಿತರೂರ್ ಮಧ್ಯೆ ಸ್ಪರ್ಧೆ ನಡೆದಿದೆ. ಈಗಾಗಲೇ ೧೦ ರಾಜ್ಯಗಳಲ್ಲಿ ಪ್ರವಾಸ ಕೈಗೊಂಡು ನಾಯಕರ ಭೇಟಿಮಾಡಿ ಮತಯಾಚಿಸಿದ್ದೇನೆ.
ಕೆಲವರಿಗೆ ಕರೆಮಾಡಿ ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.ಶಶಿತರೂರ್ ಹಾಗೂ ನಾನು ಸ್ನೇಹಿತರು, ನನ್ನ ವಿರುದ್ಧ ಸ್ಪರ್ಧಿಸಿದ್ದಾರೆ ಎಂಬ ಮಾತ್ರಕ್ಕೆ ಅವರ ಬಗ್ಗೆ ವೈಷಮ್ಯವಿಲ್ಲ.
ಪ್ರಜಾತಂತ್ರದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರವರ ಇಚ್ಛೆ ಎಂದು ಹೇಳಿದ್ದಾರೆ.ಗಾಂಧಿ ಕುಟುಂಬವನ್ನು ಅನಗತ್ಯವಾಗಿ ಟೀಕಿಸುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದರು.