ಓಟಿಗಾಗಿ ಉಚಿತ ಪಡಿತರ

ದೇಶಾದ್ಯಂತ ಒಂದು ವರ್ಷಗಳ ಕಾಲ ಉಚಿತ ಪಡಿತರ ಆಹಾರ ಧಾನ್ಯ ವಿಸ್ತರಿಸುವ ಕೇಂದ್ರ ಸರ್ಕಾರದ ನಡೆಯ ಹಿಂದೆ ಈ ವರ್ಷ ನಡೆಯಲಿರುವ ಕರ್ನಾಟಕ ಸೇರಿ ೯ ರಾಜ್ಯಗಳ ವಿಧಾಸನಭೆ ಮತ್ತು ೨೦೨೪ ಲೋಕಸಭೆ ಚುನಾವಣೆಯತ್ತ ಚಿತ್ತ ಹರಿಸಿ ಪಡಿತರ ಆಹಾರ ಧಾನ್ಯ ವಿಸ್ತರಿಸಲಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
೯ ರಾಜ್ಯಗಳ ಜೊತೆಗೆ ಈ ವರ್ಷವೇ ಜಮ್ಮು ಕಾಶ್ಮೀರಕ್ಕೂ ವಿಧಾಸನಭೆ ಚುನಾವಣೆ ನಡೆಯಲಿದ್ದು ಇದರ ದಿನಾಂಕ ಘೋಷಣೆಯಾದರೆ ಒಟ್ಟು ೧೦ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆದಂತಾಗಲಿದೆ. ಇದನ್ನೆಲ್ಲಾ ಗಮನದಲ್ಲಿಟ್ಟುಕೊಂಡು ಒಂದು ವರ್ಷ ಉಚಿತ ಪಡಿತರ ವಿತರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.ವರ್ಷದ ಆರಂಭದಲ್ಲಿ ಅಂದರೆ ಫೆಬ್ರವರಿ ತಿಂಗಳಲ್ಲಿ ತ್ರಿಪುರ, ಮೇಘಾಲಯ, ನಾಗಾಲ್ಯಾಂಡ್ ರಾಜ್ಯಗಳಿಗೆ ವಿಧಾನಸಭೆ ಚುನಾವಣೆ ನಡೆಯಲಿದೆ.
ಇದರ ಬೆನ್ನಲ್ಲೇ ಏಪ್ರಿಲ್ ಮೇ ತಿಂಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ದಕ್ಷಿಣ ಭಾರತದಲ್ಲಿ ತನ್ನ ಹೆಬ್ಬಾಗಿಲು ತೆರೆಯಲು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯುವುದು ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.ಉಳಿದಂತೆ ವರ್ಷಾಂತ್ಯದ ನವಂಬರ್‌ನಲ್ಲಿ ಛತ್ತೀಸ್‌ಗಢ, ಮಧ್ಯಪ್ರದೇಶ,ಮಿಜೋರಾಂ ರಾಜ್ಯಗಳಿಗೆ ಹಾಗೂ ಡಿಸೆಂಬರ್ ತಿಂಗಳಲ್ಲಿರಾಜಸ್ಥಾನ, ತೆಲಂಗಾಣ ವಿಧಾನಸಭೆಗೆ ಚುನಾವಣೆ ನಡೆಯಲಿದೆ.
ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿ ರಾಜ್ಯದ ಸ್ಥಾನಮಾನ ನೀಡಿ ವಿಧಾನಸಭೆ ಚುನಾವಣೆ ನಡೆಸುವ ಉದ್ದೇಶ ಹೊಂದಲಾಗಿದೆ.ಇದರ ಜೊತೆಗೆ ೨೦೨೪ರ ಆರಂಭದಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲ ಲೆಕ್ಕಾಚಾರ ಹಾಕಿಯೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಂದು ವರ್ಷ ಪಡಿತರ ಆಹಾರ ಧಾನ್ಯಗಳನ್ನು ಉಚಿತವಾಗಿ ವಿತರಿಸಲು ಮುಂದಾಗಿದೆ ಎಂದು ಹೇಳಲಾಗಿದೆ.ಕಳೆದ ವರ್ಷ ಡಿಸೆಂಬರ್ ೨೪ ರಂದು ಕೇಂದ್ರ ಸಚಿವ ಸಂಪುಟದಲ್ಲಿ ದೇಶದಲ್ಲಿ ಮತದಾರರಿಗೆ ಉಚಿತಗಳ ಬಗ್ಗೆ ಚರ್ಚೆಯ ನಡುವೆ ಬಂದಿದೆ.
೨೦೨೩ ರಲ್ಲಿ ಒಂಬತ್ತು ರಾಜ್ಯಗಳ ಚುನಾವಣೆಗಳಿಂದ ತುಂಬಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.