
ಹಿಮಾಚಲ ಪ್ರದೇಶದ ಕುಲುವಿನ ಸೈನ್ಸ್ ಕಣಿವೆಯಲ್ಲಿ ಇಂದು ಮುಂಜಾನೆ ಖಾಸಗಿ ಬಸ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ.ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಬಸ್ಸಿನಲ್ಲಿ ಸುಮಾರು 45 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದ್ದು ಕೆಲವರು ಅಚ್ಚರಿ ರೀತಿಯಲ್ಲಿ ಅಪಾಯದಿಂದ ಪಾರಾಗಿದ್ದಾರೆ.ಘಟನೆಯಲ್ಲಿ 20ಕ್ಕೂ ಹಚ್ಚು ಮಮದಿ ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ.
ಅಪಘಾತದ ಸ್ಥಳವು ಶಿಮ್ಳ ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿ.ಮೀ ದೂರದಲ್ಲಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.