ಪೊಲೀಸ್
ಕಮಿಷನರ್ ಆಗಿ ಪ್ರತಾಪ್ ರೆಡ್ಡಿ ನೇಮಕ…

ಬೆಂಗಳೂರು: ಬೆಂಗಳೂರು ನಗರದ ಪೊಲೀಸ್ ಕಮಿಷನರ್ ಆಗಿ 1991ನೇ ಬ್ಯಾಚ್ನ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿರುವ ಸಿ.ಎಚ್. ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.ಕಮಲ್ ಪಂತ್ ಅವರನ್ನು ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಸಿ.ಹೆಚ್. ಪ್ರತಾಪ್ ರೆಡ್ಡಿ ಅವರನ್ನು ನೇಮಿಸಲಾಗಿದೆ. ಇನ್ನು ಅಲೋಕ್ ಕುಮಾರ್ ಅವರನ್ನು ಎಡಿಜಿಪಿ ಲಾ ಅಂಡ್ ಆರ್ಡರ್ ಆಗಿ ವರ್ಗಾವಣೇ ಮಾಡಲಾಗಿದೆ. ಆರ್. ಹಿತೇಂದ್ರ ಅವರನ್ನು ಕೆಎಸ್ ಆರ್ ಪಿಯ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಡಿಸಿಪಿ ಎಂ.ಎನ್. ಅನುಚೇತ್ ಅವರನ್ನು ಸಿಐಡಿ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ.