
ಕ್ರಿಸ್ಮಸ್ ನಂತರ ಕರ್ನಾಟಕದಲ್ಲಿ ಚರ್ಚ್ ಮೇಲೆ ದಾಳಿ. ಮೈಸೂರಿನ ಪಿರಿಯಾಪಟ್ಟಣದ ಸೇಂಟ್ ಮೇರಿ ಚರ್ಚ್ ನಲ್ಲಿ ಮಂಗಳವಾರ ರಾತ್ರಿ ದಾಳಿ ನಡೆದಿದೆ.
ಎನ್‌ಡಿಟಿವಿ ನೀಡಿರುವ ವರದಿಯ ಪ್ರಕಾರ ಚರ್ಚ್ ಮೇಲೆ ದಾಳಿ ಮಾಡಿದ ಅಪರಿಚಿತ ವ್ಯಕ್ತಿಗಳು ಬಾಲ ಯೇಸುವಿನ ಪ್ರತಿಮೆಯನ್ನು ನಾಶಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರಿನ ಪಿರಿಯಾಪಟ್ಟಣದ ಸೇಂಟ್ ಮೇರಿ ಚರ್ಚ್ ನಲ್ಲಿ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕ್ರಿಸ್‌ಮಸ್‌ನ ಎರಡು ದಿನಗಳ ನಂತರ ಚರ್ಚ್ ಅನ್ನು ಹಾಗೂ ವಸ್ತುಗಳನ್ನು ನಾಶ ಪಡಿಸಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡಲು ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ. ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಚರ್ಚ್ ಆವರಣದಲ್ಲಿ ಅಳವಡಿಸಿರುವ ಸಿಸಿಟಿವಿ ಮೂಲಕ ತನಿಖೆ ನಡೆಸಲಾಗುತ್ತಿದೆ. ದೃಶ್ಯಾವಳಿಗಳನ್ನು ಪರಿಶೀಲಿಸುವ ಮೂಲಕ ದಾಳಿಕೋರರನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಪ್ರಾಥಮಿಕ ತನಿಖೆಯಿಂದ ಇದೊಂದು ಕಳ್ಳತನ ಪ್ರಕರಣ ಎಂದು ತಿಳಿದು ಬಂದಿದೆ.
ಚರ್ಚ್‌ನ ಹೊರಗೆ ಇರಿಸಲಾಗಿದ್ದ ಹಣ ಮತ್ತು ಕಾಣಿಕೆ ಪೆಟ್ಟಿಗೆಗಳನ್ನು ಲೂಟಿ ಮಾಡಲಾಗಿದೆ. ಆರೋಪಿಗಳ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ವರದಿ :ಆಂಟೋನಿ ಬೇಗೂರು