ಕ್ರೀಡೆ

ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ ಪುರಸ್ಕೃತ ಖೋಖೋ ಕ್ರೀಡಾಪಟು ವಿನಯ್ ನಿಧನ

ತೀವ್ರ ಜ್ವರದಿಂದ ಬಳಲುತ್ತಿದ್ದ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಖೋ ಖೋ ಕ್ರೀಡಾಪಟು ತೀರ್ಥಹಳ್ಳಿ ಮೂಲದ ವಿನಯ್ ಮೃತಪಟ್ಟಿದ್ದಾರೆ.ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜ್ವರ ಮತ್ತಷ್ಟು ಹೆಚ್ಚಾದಾಗ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ನಿಯಂತ್ರಣಕ್ಕೆ ಬಾರದೆ ನಿನ್ನೆ ರಾತ್ರಿ ನಿಧನರಾಗಿದ್ದಾರೆ.ಖೋ ಖೋ ಕ್ರಿಡಾಪಟುವಾಗಿದ್ದ ವಿನಯ್ ಅನೇಕ ಕ್ರೀಡಾ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ರಾಜ್ಯದ ಖೋ ಖೋ ತಂಡವನ್ನು ಪ್ರತಿನಿಸುತ್ತಿದ್ದರು. ಇವರಿಗೆ ಕರ್ನಾಟಕ ಕ್ರೀಡಾ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.ವಿನಯ್ ಅವರ ಅಂತಿಮ ದರ್ಶನಕ್ಕೆ ತೀರ್ಥಹಳ್ಳಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಕ್ರೀಡಾ ಪ್ರೇಮಿಗಳು, ರಾಜಕೀಯ ಮುಖಂಡರು, ವಿವಿಧ ಗಣ್ಯರು ಅವರ ನಿವಾಸಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವಾನ ಹೇಳೀದರು.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button