ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾದ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್

ರಾಜಧಾನಿ: ಕರ್ನಾಟಕ ಚಲನಚಿತ್ರ ಅಕಾಡೆಮಿ
ಅಧ್ಯಕ್ಷರನ್ನಾಗಿ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್
ಕಶ್ಯಪ್ ಅವರನ್ನು ನೇಮಿಸಿ ಎಂದು ಸರ್ಕಾರ ಆದೇಶಿಸಿದೆ.
ಸುನೀಲ್ ಪುರಾಣಿಕ್ರಿಂದ ಅವರಿದ ಅಧ್ಯಕ್ಷ ಸ್ಥಾನಕ್ಕೆ
ಅಶೋಕ್ ಕಶ್ಯಪ್ ನೇಮಕವಾಗಿದಾರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರ ಆದೇಶಿಸಿದೆ.
ಅಶೋಕ್ ಕಶ್ಯಪ್ ಕನ್ನಡದ ಸಾಕಷ್ಟು ಸಿನಿಮಾಗಳಿಗೆ
ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿದಾರೆ. ಅವರು
‘ಲಿಫ್ಟ್ ಕೊಡ್ಲಾ’, ‘ಧ್ವಜ’ ಸೇರಿದಂತೆ ಹಲವು ಚಿತ್ರಗಳನ್ನು
ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಅವರು
ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾಗಿಯೂ
ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ರಾಷ್ಟ್ರ ಪ್ರಶಸ್ತಿ ಪಡೆದ
‘ತಲೆದಂಡ’ ಸಿನಿಮಾಗೆ ಅಶೋಕ್ ಕಶ್ಯಪ್
ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದಾರೆ.

ಇದೀಗ ತೆರೆಗೆ ಬರಲು ಸಿದ್ಧವಾಗಿರುವ ‘ಬೇಬಿ ಮೀಸಿಂಗ್’ ಎಂಬ ಸಿನಿಮಾದಲ್ಲಿ ಸಿನಿಮಾಟೋಗ್ರಾಫಿ ಜೊತೆಗೆ ಒಂದು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ.