
ಹವಾಮಾನ ಅಪ್‌ಡೇಟ್: ಮುಂದಿನ ಕೆಲವು ದಿನಗಳಲ್ಲಿ ದೇಶದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆಯಾಗಲಿದ್ದು, ಈ ಬಾರಿಯ ಗಣೇಶನ ಉತ್ಸವಕ್ಕೆ ವರುಣ ತೊಂದರೆ ನೀಡಲಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಕುರಿತಂತೆ ಎಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಸೋಮವಾರ ನಾಗಾಲ್ಯಾಂಡ್, ಮಣಿಪುರ, ತ್ರಿಪುರಾ ಮತ್ತು ಮಿಜೋರಾಂನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಮತ್ತೊಂದೆಡೆ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿಯೂ ವರುಣ ಅವಾಂತರ ಸೃಷ್ಟಿಸಲಿದ್ದಾನೆ ಎಂದು ಭವಿಷ್ಯ ನುಡಿದಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಕರ್ನಾಟಕ, ತೆಲಂಗಾಣ, ಬಿಹಾರ, ಪೂರ್ವ ಮತ್ತು ಮಧ್ಯ ಉತ್ತರ ಪ್ರದೇಶ, ಛತ್ತೀಸ್‌ಗಢ, ವಿದರ್ಭ, ಲಕ್ಷದ್ವೀಪ, ಜಮ್ಮು ಮತ್ತು ಕಾಶ್ಮೀರದಲ್ಲಿ , ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಹವಾಮಾನ ಇಲಾಖೆಯ ಪ್ರಕಾರ ಮುಂದಿನ ಎರಡು ದಿನಗಳ ಕಾಲ ಈಶಾನ್ಯ ರಾಜ್ಯಗಳ ಜೊತೆಗೆ ಬಿಹಾರ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಲಿದೆ. ಉತ್ತರಾಖಂಡದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಂದು ಈ ರಾಜ್ಯಗಳಲ್ಲಿ ಮಳೆ ಎಚ್ಚರಿಕೆ:ಇಂದು ಆಗಸ್ಟ್ 29 ರಂದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಮತ್ತೊಂದೆಡೆ, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ, ಆದರೆ ಮುಂದಿನ 4 ದಿನಗಳ ಕಾಲ ಅರುಣಾಚಲ ಪ್ರದೇಶ ಮತ್ತು ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಸಹಿತ ಭಾರೀ ಮಳೆ ನಿರೀಕ್ಷಿಸಲಾಗಿದೆ.
ಪೂರ್ವ ಮಧ್ಯಪ್ರದೇಶ, ತಮಿಳುನಾಡು ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಅಂತೆಯೇ, ಒಡಿಶಾ, ಬಿಹಾರ, ಪೂರ್ವ ಮತ್ತು ಮಧ್ಯ ಉತ್ತರ ಪ್ರದೇಶ, ಛತ್ತೀಸ್‌ಗಢ, ವಿದರ್ಭ, ಲಕ್ಷದ್ವೀಪ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಹಾರಾಷ್ಟ್ರ, ದಕ್ಷಿಣ ಗುಜರಾತ್ ಮತ್ತು ಪಶ್ಚಿಮ ಮಧ್ಯಪ್ರದೇಶದ ಒಂದೆರಡು ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.