ರಾಜ್ಯ

ಕಲ್ಯಾಣ ಕರ್ನಾಟಕಕ್ಕೆ ೫೦೦೦ ಕೋಟಿ

ಸಮಗ್ರ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಮುಂಬರುವ ಬಜೆಟ್‌ನಲ್ಲಿ ೫ ಸಾವಿರ ಕೋಟಿ ರೂ. ಸಲಿರಿಸಲಾಗುವುದೆಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಳೆದ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ೩ಸಾವಿರ ಕೋಟಿ ಅನುದಾನ ನಿಗದಿಪಡಿಸಲಾಗಿತ್ತು. ಈ ಭಾಗದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮುಂಬರುವ ಬಜೆಟ್‌ನಲ್ಲಿ ೫ ಸಾವಿರ ಕೋಟಿ ಅನುದಾನ ಮೀಸಲಿಡಲಾಗುವುದೆಂದು ಸಿಎಂ ಬೊಮ್ಮಾಯಿ ತಿಳಿಸಿದರು.

ನಗರದ ನೂತನ ವಿಶ್ವವಿದ್ಯಾಲಯ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಅಂಗವಾಗಿ ಏರ್ಪಡಿಸಿದ್ದ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಈ ಭಾಗದ ಅಭಿವೃದ್ಧಿಗೆ ೩೭೧ಜೆ ಕಲಂ ಅನುಷ್ಠಾನವಷ್ಟೇ ಸಾಲದು ನಿಗದಿಪಡಿಸಿರುವ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಸಹ ಬಹುಮುಖ್ಯವಾಗಿದೆ.

ಈ ನಿಟ್ಟಿನಲ್ಲಿ ಮುಂಬರುವ ಬಜೆಟ್‌ನಲ್ಲಿ ೫ ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು.ಕಲ್ಯಾಣ ರಾಜ್ಯವಾಗಬೇಕೆಂಬ ನಿಟ್ಟಿನಲ್ಲಿ ರಾಜ್ಯಸರ್ಕಾರ ಕಾರ್ಯೋನ್ಮುಖವಾಗಿದ್ದು, ಈ ಭಾಗದ ಶೈಕ್ಷಣಿಕ ಅಭಿವೃದ್ಧಿಗಾಗಿಪ್ರಸಕ್ತ ಸಾಲಿನಲ್ಲಿ ೨,೧೦೦ ಶಾಲಾ ಕೊಠಡಿಗಳನ್ನು ಕಲ್ಯಾಣ ಕರ್ನಾಟಕ ಭಾಗದಲ್ಲಿ ತೆರೆಯಲು ಮುಂದಾಗಿದ್ದು, ೨,೫೦೦ ಅಂಗನವಾಡಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಜನಪ್ರತಿನಿಧಿಗಳು ಪಕ್ಷಬೇಧ ಮರೆತು ಒಂದಾಗಬೇಕು.

ಈ ನಿಟ್ಟಿನಲ್ಲಿ ಅನಗತ್ಯ ರಾಜಕಾರಣ ಮಾಡುವುದು ಬೇಡ. ಕಲ್ಯಾಣ ಕರ್ನಾಟಕದ ಮೂಲಕ ನವಕರ್ನಾಟಕ ಹಾಗೂ ನವಭಾರತದ ಅಭಿವೃದ್ಧಿಯಾಗಬೇಕು.ನಮ್ಮೆಲ್ಲರ ಕನ್ನಡದ ಭಾಷೆ, ಸಂಸ್ಕೃತಿ, ನೆಲ-ಜಲ ಒಂದಾಗಿವೆ ಎಂದರು.ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರಾಜಕೀಯ ಇಚ್ಛಾಶಕ್ತಿ ಇದ್ದಾಗ ಮಾತ್ರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದರು.ಈ ಭಾಗದ ವಿಮೋಚನೆಗೆ ನಾವು ಒಂದು ವರ್ಷ ಕಾಯಬೇಕಾಯಿತು.

ಸರ್ದಾರ್ ವಲ್ಲಭಾಭಾಯ್ ಪಟೇಲ್ ಅವರ ನಿರ್ಧಾರದಿಂದ ಈ ಭಾಗ ಸಮಗ್ರ ಕರ್ನಾಟಕ ಸೇರುವಂತಾಯಿತು. ಇವರ ಜತೆಗೆ ಸ್ಥಳೀಯ ನಾಯಕರಾದ ರಮಾನಂದ ತೀರ್ಥರು ಸರದಾರ ಶರಣಗೌಡ ಇನಾಮ್‌ದಾರ್, ರಾಜಾ ವೆಂಕಟಪ್ಪ, ದತ್ತಾತ್ರೇಯ ಅವರಾದಿ, ಇದರ ಜತೆಗೆ ೩೭೧ಜೆ ಗೆ ಹೋರಾಟ ಮಾಡಿದ ವೈeನಾಥ ಪಾಟೀಲ್ ಅವರನ್ನು ಸ್ಮರಿಸಿದರು.ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಶಾಲೆಗಳಲ್ಲಿ ಶೌಚಾಲಯ ನಿರ್ಮಿಸಲು ಆದೇಶಿಸಲಾಗಿದೆ.

ಈ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿದ್ದೇವೆ. ಕೇಂದ್ರ ಸರ್ಕಾರ ಈಗಾಗಲೇ ಕಲಬುರಗಿ, ವಿಜಯಪುರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪಿಸಲು ನಿರ್ಧರಿಸಿದೆ. ಇದರಿಂದ ೨೫ ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಹೇಳಿದರು.ಈ ಭಾಗದ ಪ್ರತಿಯೊಂದು ಹಳ್ಳಿಂiiಲ್ಲೂ ಯುವಕ ಸಂಘ ಸ್ಥಾಪನೆ ಮಾಡಲಾಗಿದೆ. ಪ್ರತಿ ಗ್ರಾಮದಲ್ಲಿ ೨ ಯುವಶಕ್ತಿ ಸಂಘ ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ.

ಯುವಕರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಯೋಜನೆ ರೂಪಿಸಿದ್ದೇವೆ. ಇದರಿಂದಾಗಿ ೧ ಲಕ್ಷ ಯುವಕರಿಗೆ ಉದ್ಯೋಗ ದೊರೆಯಲಿದೆ.ಒಂದು ಲಕ್ಷ ಯುವಕರಿಗೆ ಉದ್ಯೋಗ ದೊರೆಯಲಿದ್ದು, ಕುಶಲಕರ್ಮಿಗಳ ಸಮುದಾಯದ ಪ್ರತಿಯೊಬ್ಬ ಯುವಕರಿಗೆ ೫೦ ಸಾವಿರ ಮೀಸಲಿಡಲಾಗಿದೆ ಎಂದು ಬೊಮ್ಮಾಯಿ ವಿವರಿಸಿದರು.ಕಲ್ಯಾಣ ಕರ್ನಾಟಕ ಜನರು ಗುಳೆ ಹೋಗುವುದನ್ನು ತಡೆಯಲು ಸಮಗ್ರ ಯೋಜನೆ ರೂಪಿಸಿದ್ದೇವೆ.

ಬೀದರ್, ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದೇವೆ.ಬಸವರಾಜ ಪಾಟೀಲ್ ಸೇಡಂ ಅವರ ನೇತೃತ್ವದಲ್ಲಿ ಸಾಂಸ್ಖೃತಿಕ ಸಂಘ ನಿರ್ಮಿಸಲಾಗಿದೆ. ೨ ಲಕ್ಷಕ್ಕಿಂತ ಹೆಚ್ಚು ಪ್ರದೇಶ ಬಂಜರು ಭೂಮಿ ಇದೆ.

ಕೃಷಿಗೆ ಹೆಚ್ಚಿನ ಅವಕಾಶವೂ ಇದೆ. ಈ ಭಾಗದ ಹಸಿರು ಪ್ರದೇಶ ಹೆಚ್ಚಿಸಲು ಕೊಪ್ಪಳದಿಂದ ಕಲಬುರಗಿ, ಬಳ್ಳಾರಿಯಿಂದ ರಾಯಚೂರುವರೆಗೆ ಗ್ರೀನ್‌ಕಾರಿಡಾರ್ ಮಾಡಲು ತೀರ್ಮಾನಿಸಿದ್ದು, ಇದಕ್ಕಾಗಿ ಅರಣ್ಯ ಇಲಾಖೆಗೆ ೧೦ ಕೋಟಿ ರೂ.

ಬಿಡುಗಡೆ ಮಾಡಲಾಗಿದೆ ಎಂದರು.ಬೀದರ್‌ನಿಂದ ಬಳ್ಳಾರಿವರೆಗೆ ೪ ಪಥದ ಮಾರ್ಗ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಯಾದಗಿರಿ ರಾಯಚೂರು, ಕಲಬುರಗಿಯಲ್ಲಿ ರಿಂಗ್‌ರೋಡ್ ಅಭಿವೃದ್ಧಿಗೆ ಕೇಂದ್ರದ ಅನುದಾನದಿಂದ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದ ಅವರು, ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ೧೦೦ ಕೋಟಿ ರೂ. ನೀಡಿದ್ದೇನೆ ಎಂದು ಹೇಳಿದರು.

ಕಲಬುರಗಿ ದಕ್ಷಿಣ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ದತ್ತಾತ್ರೇಯ ಸಿ. ಪಾಟೀಲ್ ರೇವೂರ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ಕಲಬುರಗಿ-ಯಾದಗಿರಿ ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷರು ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್, ವಿಧಾನ ಪರಿಷತ್ ಶಾಸಕ ಹಾಗೂ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನ್ಸೂರ್, ಶಾಸಕರುಗಳಾದ ಸುಭಾಷ್ ಆರ್. ಗುತ್ತೇದಾರ್, ಬಸವರಾಜ ಮತ್ತಿಮಡು, ಡಾ.

ಅವಿನಾಶ ಉಮೇಶ್ ಜಾಧವ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದ್ರಕಾಂತ ಜಿ. ಪಾಟೀಲ್ (ಚಂದು ಪಾಟೀಲ್), ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ, ಮಾಜಿ ಎಂ.ಎಲ್.ಸಿ. ಅಮರನಾಥ ಪಾಟೀಲ್, ಡಿ.ಸಿ.ಯಶವಂತ ವಿ. ಗುರುಕರ್, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಹೈದ್ರಾಬಾದ್ ಕರ್ನಾಟಕ ಪ್ರದೇಶ ಇತಿಹಾಸ ರಚನಾ ಸಮಿತಿಯ ಸದಸ್ಯ ಕಾರ್ಯದರ್ಶಿ ಲಕ್ಷ್ಮಣ ದಸ್ತಿ, ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

ಸಿಎಂ ಮಾಲಾರ್ಪಣೆಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಶನಿವಾರ ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್.ವಿ.ಪಿ.ವೃತ್ತದಲ್ಲಿ ಹೈದ್ರಾಬಾದ್- ಕರ್ನಾಟಕ ವಿಮೋಚನೆಯ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಕೇಂದ್ರ ರಾಸಾಯನಿಕ, ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವ ಭಗವಂತ ಖೂಬಾ, ಗೃಹ ಸಚಿವ ಅರಗ ಜ್ಞಾನೇಂದ್ರ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಮುರುಗೇಶ್ ಆರ್. ನಿರಾಣಿ, ತೋಟಗಾರಿಕೆ ಮತ್ತು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಮುನಿರತ್ನ ಅವರು ಸಾಥ್ ನೀಡಿದರು.

ಮೋದಿ ಶುಭಾಶಯಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಪ್ರಯುಕ್ತ ಪ್ರಧಾನಮಂತ್ರಿ ನರೇಂದ್ರ ಮೋದಿಅವರು ಕಳಿಸಿದ ಶುಭ ಸಂದೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಭಾಷಣದ ವೇಳೆಎಲ್ಲರ ಗಮನಕ್ಕೆ ತಂದರು.ಮೇಲಾಗಿ, ಕಲ್ಯಾಣ ಕರ್ನಾಟಕ ಭಾಗವನ್ನು ನಿಜಾಮರ ಮುಷ್ಠಿಯಿಂದ ಬಿಡುಗಡೆಗೊಳಿಸಿದ ಸರ್ದಾರ್ವಲ್ಲಭಭಾಯಿ ಪಟೇಲ್ ಅವರಂತೆಯೇ ಪ್ರಧಾನಿ ಮೋದಿ ಸಹ ಓರ್ವ ಉಕ್ಕಿನ ಮನುಷ್ಯ ಎಂದುಶ್ಲಾಘಿಸಿದರು.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button