ಕಾಂಗ್ರೆಸ್ ನಾಯಕ, ಮಾಜಿ ಸಚಿವ ಸಾಧು ಸಿಂಗ್ ಅರೆಸ್ಟ್
Former Punjab minister Sadhu Singh Dharamsot arrested

ಭ್ರಷ್ಟಾಚಾರ ಪ್ರಕರಣದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಸಾಧು ಸಿಂಗ್ ಧರಮ್ಸೋಟ್ ಅವರನ್ನು ಇಂದು ಬಂಧಿಸಲಾಗಿದೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಕಾಂಗ್ರೇಸ್ ಸರ್ಕಾರದ ಸಂಪುಟದಲ್ಲಿ ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸಿದ್ದ ಸಾಧು ಸಿಂಗ್ ಧರಮ್ಸೋಟ್ ಅವರನ್ನು ಇಂದು ಮುಂಜಾನೆ ವಿಜಿಲೆನ್ಸ್ ಬ್ಯೂರೋ ಅಧಿಕಾರಿಗಳು ಬಂಧಿಸಿದ್ದಾರೆ.
ಇವರೊಂದಿಗೆ ಇವರಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಸ್ಥಳೀಯ ಪತ್ರಕರ್ತ ಕಮಲ್ಜಿತ್ ಸಿಂಗ್ ಅವರನ್ನೂ ವಶಕ್ಕೆಪಡೆಯಲಾಗಿದೆ.ಕಾಂಗ್ರೆಸ್ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾನ್ ಎಚ್ಚರಿಕೆ ನೀಡಿದ ಒಂದು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ.ಬಂಧನವಿವರಗಳನ್ನು ಖಚಿತಪಡಿಸಿದ.
ವಿಜಿಲೆನ್ಸ್ ಬ್ಯೂರೋ ಅಧಿಕಾರಿಯೊಬ್ಬರು, ಇಬ್ಬರನ್ನು ಭ್ರಷ್ಟಾಚಾರದ ಆರೋಪದಡಿಯಲ್ಲಿ ಬಂಧಿಸಲಾಗಿದೆ ಎಂದು ಹೇಳಿದ್ದಾರೆ ಕಳೆದ ವಾರ ವಿಭಾಗೀಯ ಅರಣ್ಯ ಅಕಾರಿ ಗುನರ್ ಮ್ಪ್ರೀತ್ ಸಿಂಗ್ ಮತ್ತು ಹರ್ಮಿಂದರ್ ಸಿಂಗ್ ಹುಮ್ಮಿ ಅವರನ್ನು ಬಂಧಿಸಿ ಮಾಜಿ ಸಚಿವರ ವಿರುದ್ಧ ಅನೇಕ ಪುರಾವೆಗಳನ್ನು ಸಂಗ್ರಹಿಸಿತ್ತು.
ಕಮಲ್ಜೀತ್ ಮೂಲಕ ಹಮ್ಮಿ ಅವರು ಧರಮ್ಸೋಟ್‍ಗೆ ಭಾರಿ ಲಂಚ ನೀಡುತ್ತಿದ್ದರು ಎನ್ನಲಾಗಿದೆ. ಅರಣ್ಯ ಮತ್ತು ಸಮಾಜ ಕಲ್ಯಾಣ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಸಿರುವ ಬಗ್ಗೆ ಸಾಕಷ್ಟು ಪುರಾವೆಗಳಿವೆ ಎಂದು ಮೂಲಗಳು ತಿಳಿಸಿವೆ.