ರಾಜಕೀಯ
ಕಾಂಗ್ರೆಸ್ ವಿರುದ್ಧ ಬಿಎಸ್‌ವೈ ವಾಗ್ದಾಳಿ

ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕನಸಿನ ಮಾತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಬೈಲಹೊಂಗಲಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಖಡಾಖಂಡಿತವಾಗಿ ನುಡಿದರು.
ಕಾಂಗ್ರೆಸ್‌ನವರ ಭಾರತ ಜೋಡೋ ಯಾತ್ರೆ ವಿಫಲವಾಗಲಿದೆ ಎಂದ ಅವರು ಜನತೆ ಬಿಜೆಪಿ ಹಾಗೂ ಪ್ರಧಾನಿ ಮೋದಿಯವರು ಪರವಾಗಿದ್ದಾರೆ ಎಂದು ಹೇಳಿದರು.
ಇದೇ ದಿ. ೨೨ ರಿಂದ ತಾವು ರಾಜ್ಯ ಪ್ರವಾಸ ಕೈಗೊಳ್ಳುತ್ತಿರುವುದಾಗಿ ಅವರು ತಿಳಿಸಿದರು.ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿನ ರೋಗಿಗಳ ಸಾವು ಪ್ರಕರಣದ ಕುರಿತಾದ ಪ್ರಶ್ನೆಗೆ ಉತ್ತರಿಸುತ್ತ, ಈ ಕುರಿತು ತನಿಖೆ ನಡೆಯುತ್ತಿದೆ. ವರದಿ ಏನು ಬರುತ್ತದೋ ಕಾಯ್ದು ನೋಡೋಣ ಎಂದು ಯಡಿಯೂರಪ್ಪ ಹೇಳಿದರು.