ಅಪಘಾತ
ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ.

ಬಾಗಲಕೋಟೆ: ಶ್ರೀ ಅಭಿನವ ಕಾಡಸಿದ್ದೇಶ್ವರ ಸ್ವಾಮೀಜಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದಲ್ಲಿ ಅದೃಷ್ಟವಶಾತ್ ಸ್ವಾಮೀಜಿ ಮತ್ತು ಕಾರಿನಲ್ಲಿದ್ದ ಇತರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಿಗ್ಗೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ತೋಗುಣಸಿ ತಾಂಡಾದ ಬಳಿ ಈ ಅಪಘಾತ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ನೀಲಗಿರಿ ಮರಕ್ಕೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಸ್ವಾಮೀಜಿ ಹಾಗೂ ಚಾಲಕ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಸ್ವಾಮೀಜಿ, ಗದಗ ಜಿಲ್ಲೆ ಹಾಲಕೇರಿಯಿಂದ ಗುಳೇದಗುಡ್ಡ ಪಟ್ಟಣಕ್ಕೆ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಗುಳೇದಗುಡ್ಡ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಮಠಕ್ಕೆ ಸ್ವಾಮೀಜಿ ತೆರಳಿದ್ದಾರೆ.