ಕಾರು-ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ, ಒಂದೇ ಕುಟುಂಬದ 8 ಮಂದಿ ಸಾವು
2 injured jeep hits truck in BarmerRajasthan: 8 family members killed

ಜೈಪುರ,ಜೂ.7- ಸಂಬಂಧಿಕರ ಮದುವೆಗೆ ತೆರಳುತ್ತಿದ್ದ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬಾಡಮೇರ್ ಜಿಲ್ಲೆಯ ಗುಡಮಲಾಮಿ ಹೆದ್ದಾರಿಯಲ್ಲಿ ಸಂಭವಿಸಿದೆ.ಜೆಲ್ಲೋರ್ ಜಿಲ್ಲೆಯ ಸೆಂಚೋರ್‍ನಲ್ಲಿ ನೆಲೆಸಿರುವ ಕುಟುಂಬದವರು ನಿನ್ನೆ ಕಾರಿನಲ್ಲಿ ಗುಡಮಲಾಮಿಯಲ್ಲಿ ನಡೆಯುತ್ತಿದ್ದ ಮದುವೆಗೆ ತೆರಳಿದ್ದರು. ಈ ವೇಳೆ ಎಸ್‍ಯುವಿ ಕಾರು ಟ್ರಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟರೆ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಚಿಂತಾಜನಕ ಸ್ಥಿತಿಯಲ್ಲಿರುವ ಮತ್ತಿಬ್ಬರನ್ನು ಸಂಚೋರ್ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಗುಡಮಲಾನಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.