Uncategorized

ಕಾರ್ಮಿಕರ ಮಕ್ಕಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಆರ್ಥಿಕ ನೆರವಿಗೆ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಧಾರವಾಡ: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಬೀಡಿ, ಗಣಿ ಹಾಗೂ ಸಿನೆಮಾ ಕಾರ್ಮಿಕರ ಮಕ್ಕಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಆರ್ಥಿಕ ನೆರವಿಗೆ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.

ಒಂದರಿಂದ ಮೆಟ್ರಿಕ್‍ಪೂರ್ವ ತರಗತಿ ವಿದ್ಯಾರ್ಥಿಗಳು ಸೆಪ್ಟಂಬರ್ 30 ರೊಳಗೆ ಹಾಗೂ ಮೆಟ್ರಿಕ್ ನಂತರದ ತರಗತಿಗಳ ವಿದ್ಯಾರ್ಥಿಗಳು ಅಕ್ಟೋಬರ್ 31 ರವರೆಗೆ ನ್ಯಾಷನಲ್ ಸ್ಕಾಲರ್ ಶಿಪ್ ಪೋರ್ಟಲ್ ವೆಬ್‍ಸೈಟ್ https://scholarships.gov.in ಮೂಲಕ ಆನ್‍ಲೈನ್‍ನಲ್ಲಿ ಮಾತ್ರ ಸ್ವೀಕರಿಸಲಾಗುವುದು.

ತಾಂತ್ರಿಕ ನೆರವಿಗೆ [email protected] ಅಥವಾ ಸಹಾಯವಾಣಿ ಸಂಖ್ಯೆ 0120-6619540 ಸಂಪರ್ಕಿಸಬಹುದು. ಹೆಚ್ಚಿನ ವಿವರಗಳಿಗೆ [email protected] ಇಮೇಲ್ ಮಾಡಬಹುದು ಎಂದು ಕಾರ್ಮಿಕ ಸಚಿವಾಲಯದ ಧಾರವಾಡ ಡಿಸ್ಪೆನ್ಸರಿಯ ವೈದ್ಯಾಧಿಕಾರಿ ಡಾ. ದರ್ಶನ ಎಲ್. ಗೌಡ ಕೋರಿದ್ದಾರೆ.

𝐂𝐡𝐚𝐧𝐝𝐚𝐧 𝐌𝐑𝐂

𝐃𝐈𝐑𝐄𝐂𝐓𝐎𝐑 -𝐍𝐂𝐈𝐁 𝐓𝐈𝐌𝐄𝐒 𝐌𝐄𝐃𝐈𝐀 𝟐𝟒/𝟕 𝐏𝐕𝐓. 𝐋𝐓𝐃.

Related Articles

Leave a Reply

Your email address will not be published. Required fields are marked *

Back to top button