
ತರಗತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಹೊರಗೆ ಕರೆದು ಆಕೆ ಬರುತ್ತಿದ್ದಂತೆ ಮನಬಂದಂತೆ ಇರಿದ ಯುವಕ ತಾನು ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ ಲಯಸ್ಮಿತ (19) ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಇಂಜಿನಿಯರಿಂಗ್ ದ್ವಿತೀಯ ವಿದ್ಯಾರ್ಥಿನಿ ಮೃತಪಟ್ಟಿದ್ದು, ದ್ವಿತೀಯ ವರ್ಷದ ಬಿ.ಇ ವಿದ್ಯಾರ್ಥಿ ಪವನ್ ಕಲ್ಯಾಣ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ರಾಜಾನುಕುಂಟೆ ಠಾಣಾ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಬೆಂಗಳೂರು ಗ್ರಾಮಾಂತರ (Bengaluru Rural) ಎಸ್ಪಿ ಸಹ ಭೇಟಿ ನೀಡಿ ವಿಚಾರಣೆ ನಡೆಸಲಿದ್ದಾರೆ.ಲಯಸ್ಮಿತ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಬಿ.ಟೆಕ್ ಓದುತ್ತಿದ್ದು, ಸೋಮವಾರ ಸ್ಥಳಕ್ಕೆ ಬಂದ ಸ್ಪರ್ಶ್ ಕ್ಲಾಸ್ ರೂಮಿನಲ್ಲಿದ್ದ ಲಯಸ್ಮಿತಾಗೆ ಹೊರಗೆ ಬರಲು ಹೇಳಿದ್ದಾನೆ.
ಆಕೆ ಬಂದ ಕೂಡಲೇ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು ಸುಮಾರು 6 ಬಾರಿ ಚಾಕುವಿನಿಂದ ಇರಿದಿದ್ದಾನೆ.ಬಳಿಕ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪವನ್ ಕಲ್ಯಾಣ್ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ತಿಳಿಸಿದ್ದಾರೆ.