ಅಪರಾಧ
ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮೂವರು ಉಗ್ರರ ಎನ್‌ಕೌಂಟರ್

ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್‍ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಹತರಾದ ಉಗ್ರರ ಸಂಖ್ಯೆ ಏಳಕ್ಕೆ ತಲುಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲಾಯಲ್ಲಿ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಭಾನುವಾರ ನಡೆದ ಕಾರ್ಯಾಚರಣೆ ವೇಳೆ ನಾಲ್ಕು ಉಗ್ರರು ಹತರಾಗಿದ್ದರು.
ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಧ ಮುಂದುವರೆದಿದೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಪುಲ್ವಾಮಾ ಜಿಲ್ಲಾಯಲ್ಲಿ ನಡೆದ ಮತ್ತೊಂದು ಎನ್ಕೌಂಟರ್‍ನಲ್ಲಿ ಅಪರಿಚಿತ ಉಗ್ರನೊಬ್ಬ ಬಲಿಯಾಗಿದ್ದಾನೆ ಪುಲ್ವಾಮಾದ ಚತ್ಪೋರಾದಲ್ಲಿ ಎರಡು ಕಡೆಯ ನಡುವಿನ ಗುಂಡಿನ ಚಕಮಕಿಯಲ್ಲಿ ಒಬ್ಬ ಉಗ್ರಗಾಮಿಹತನಾಗಿದ್ದು , ಕೊನೆಯದಾಗಿ ವರದಿಗಳು ಬಂದಾಗ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.