ರಾಷ್ಟ್ರಿಯ
ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್ ದಾಳಿಯಲ್ಲಿ ಉಗ್ರನನ್ನು ಹತ್ಯೆ ಮಾಡಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ.
ಪುಲ್ವಾಮಾದ ಗುಂಡಿಪೋರಾದಲ್ಲಿ ಭದ್ರತಾ ಪಡೆಗಳು ದಾಳಿ ನಡೆಸಿದ್ದಾರೆ. ಈ ವೇಳೆ ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಭಯೋತ್ಪಾದಕರನ್ನು ಪತ್ತೆ ಹಚ್ಚಲು ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಗುಂಡಿನ ದಾಳಿಯಲ್ಲಿ ಒಬ್ಬ ಉಗ್ರ ಸಾವನ್ನಪ್ಪಿದ್ದಾನೆ.

ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಈ ಬಗ್ಗೆ ಮಾತನಾಡಿ, ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಒಬ್ಬನನ್ನು ಹತ್ಯೆ ಮಾಡಲಾಗಿದ್ದು, ಕಾನ್ಸ್‌ಟೇಬಲ್ ರಿಯಾಜ್ ಅಹ್ಮದ್‍ನನ್ನು ಹತ್ಯೆಗೈದಿದ್ದ ಹಂತಕ ಸೇರಿದಂತೆ ಇಬ್ಬರು ಜೈಶ್-ಎ-ಮೊಹಮ್ಮದ್ ಉಗ್ರರು ಸಿಕ್ಕಿಬಿದ್ದಿದ್ದಾರೆ ಎಂದು ತಿಳಿಸಿದ್ದಾರೆ. ಮೇ 13ರಂದು ಪುಲ್ವಾಮಾದಲ್ಲಿ ಕಾನ್ಸ್‌ಟೇಬಲ್ ಹುತಾತ್ಮರಾಗಿದ್ದರು.