ಕುಮಾರಸ್ವಾಮಿಯವರೇ ಮುಸ್ಲಿಮರನ್ನು ಸಿಎಂ ಮಾಡ್ತೀರ: ಹಳೆ ದೋಸ್ತಿ ಜಮೀರ್ ಸವಾಲು

ಚುನಾವಣೆಯಲ್ಲಿ ಜೆಡಿಎಸ್ 113 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರುವುದಿಲ್ಲ. 25 ರಿಂದ 30 ಸ್ಥಾನಗಳನ್ನು ಗೆದ್ದರೆ ಹೆಚ್ಚು. ಸಮ್ಮಿಶ್ರ ಸರ್ಕಾರ ರಚನೆಯಾದರೆ ಎಚ್.ಡಿ.ಕುಮಾರಸ್ವಾಮಿ ಮುಸ್ಲಿಮರನ್ನು ಮುಖ್ಯಮಂತ್ರಿ ಮಾಡಲು ಸಿದ್ಧರಿದ್ದಾರೆಯೇ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್‌ಖಾನ್ ಪ್ರಶ್ನಿಸಿದ್ದಾರೆ.
ಸ್ವತಂತ್ರವಾಗಿ ಅಧಿಕಾರ ಹಿಡಿಯಲು ಸಾಧ್ಯವಿಲ್ಲದ್ದಕ್ಕೆ ಕುಮಾರಸ್ವಾಮಿ ಈ ರೀತಿಯ ಮಾತು ಆಡಿದ್ದಾರೆ. ಚುನಾವಣೆ ಬಳಿಕ ಸಮ್ಮಿಶ್ರ ಸರ್ಕಾರ ರಚನೆಯ ಸಂದರ್ಭ ಬಂದರೆ ಮುಸ್ಲಿಮರನ್ನೇ ಮುಖ್ಯಮಂತ್ರಿ ಮಾಡುತ್ತೇನೆ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ, ಈ ಮಾತಿಗೆ ಈಗಲೂ ನಾನು ಬದ್ಧ ಎಂದು ಶಾಸಕ ಜಮೀರ್ ಹೇಳಿದ್ದಾರೆ.ಈ ವಿಷಯದಲ್ಲಿ ಅಂತಿಮ ತೀರ್ಮಾನ ಹೈಕಮಾಂಡ್‌ನದೇ, ಸಿದ್ದರಾಮಯ್ಯ ಚಾಮರಾಜಪೇಟೆಯಿಂದ ಸ್ಪರ್ಧಿಸಬೇಕು.
ಅವರಿಗೆ ಕ್ಷೇತ್ರ ಬಿಟ್ಟು ಕೊಡಲು ಸಿದ್ಧನಿದ್ದೇನೆ. ಅವರು ಈ ಕ್ಷೇತ್ರದ ಅಳಿಯ. ಅಧಿಕ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.