
ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕ್ಕೆ ಆಹ್ವಾನಿಸದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಹಾಸನದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಈ ಬಗ್ಗ ನಾನು ಏನು ಮಾತನಾಡುವುದಿಲ್ಲ. ಯಾರ್ಯಾರು ಏನೇನು ಮಾಡಿದ್ರು ಎಂದು ವಿಶ್ಲೇಷಣೆ ಮಾಡುವುದಿಲ್ಲ ಎಂದರು.
ಮುಂದಿನ ವಾರ ಹಾಸನ ಜಿಲ್ಲಾ ಪ್ರವಾಸ ಮಾಡುತ್ತೇವೆ. ಹಾಸನದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇವೆ. ಹಾಸನ ಪ್ರವಾಸ ಬಳಿಕ ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಹೆಚ್.ಡಿಡಿ ತಿಳಿಸಿದರು.