Uncategorized

ಕೆಸಿಆರ್-ದೇವೇಗೌಡರ ಭೇಟಿ ಮುಂದಿನ ಚುನಾವಣೆಗೆ ದಿಕೂಚಿಯಾಗಲಿದೆ : ಹೆಚ್‌ಡಿಕೆ.

NCIB: ಬೆಂಗಳೂರು,ಮೇ 26- ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್‍ರಾವ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಲಿರುವುದು ಮುಂದಿನ ರಾಜ್ಯ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಈಗಾಗಲೇ ಚರ್ಚೆಗಳು ನಡೆಯುತ್ತಿವೆ.ಅದರ ಮುಂದುವರೆದ ಭಾಗವಾಗಿ ಇಂದು ಗೌಡರನ್ನು ಚಂದ್ರಶೇಖರ್‍ರಾವ್ ಭೇಟಿಯಾಗಿದ್ದಾರೆ ಎಂದರು.ಪ್ರಸಕ್ತ ರಾಜಕೀಯ ವಿದ್ಯಮಾನಗಳು ಹಾಗೂ ರಾಜಕೀಯದಲ್ಲಾಗುವ ಬದಲಾವಣೆಗಳ ಕುರಿತು ಚರ್ಚಿಸಲಿದ್ದಾರೆ. ತೃತೀಯ ರಂಗ ರಚನೆ ಕುರಿತಂತೆ ಈಗಲೇ ಸ್ಪಷ್ಟವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ. ಆದರೆ, ತೃತೀಯ ರಂಗ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆಗಳು ಪ್ರಾರಂಭವಾಗಿವೆ. ಒಟ್ಟಾರೆ ಈ ಭೇಟಿ ಮುಂಬರುವ 2023ರ ರಾಜ್ಯ ವಿಧಾನಸಭೆ ಹಾಗೂ 2024ರ ಲೋಕಸಭೆ ಚುನಾವಣೆಗೆ ಮುಖ್ಯವಾಗಲಿದೆ ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button