ಅಪಘಾತ

ಕೇರಳದಲ್ಲಿ ಭೀಕರ ಅಪಘಾತ ೯ ಮಂದಿ ಸಾವು

ದೇವರನಾಡಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಳದ ಮಧ್ಯರಾತ್ರಿ ವಡಕಂಚೇರಿ ಅಂಕುಮೂರ್ತಿ ಮಂಗಲದ ಬಳಿ ಎರ್ನಾಕುಲಂನ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಪ್ರವಾಸಿ ಬಸ್ ಹಿಂದಿನಿಂದ ಕೆಎಸ್‌ಆರ್‌ಟಿಸಿ ಬಸ್ (ಕೇರಳ ರಸ್ತೆ ಸಾರಿಗೆ ಸಂಸ್ಥೆ) ಬಸ್‌ಗೆ ಡಿಕ್ಕಿ ಹೊಡೆದು ೯ ಮಂದಿ ಸಾವನ್ನಪ್ಪಿದ್ದಾರೆ.

ಪ್ರವಾಸಕ್ಕೆ ಹೊರಟ ಬಸ್‌ನಲ್ಲಿ ಒಟ್ಟು ೪೨ ವಿದ್ಯಾರ್ಥಿಗಳಿದ್ದರು ಹಾಗೂ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ೪೯ ಜನ ಪ್ರಯಾಣಿಕರಿದ್ದು ಭೀಕರ ಅಪಘಾತದಲ್ಲಿ ೯ ಮಂದಿ ಸಾವನ್ನಪ್ಪಿದ್ದಾರೆ.ಮೃತರನ್ನು ಶಾಲಾ ಶಿಕ್ಷಕಿ ವಿಷ್ಣು ವಿಕೆ ಮತ್ತು ವಿದ್ಯಾರ್ಥಿಗಳಾದ ಅಂಜನಾ ಅಜಿತ್, ಇಮ್ಯಾನುಯೆಲ್ ಸಿಎಸ್, ದಿಯಾ ರಾಜೇಶ್, ಕ್ರಿಸ್ ವಿಂಟರ್‌ಬೋರ್ನ್ ಥಾಮಸ್, ಎಲ್ನಾ ಜೋಸ್ (ವಿದ್ಯಾರ್ಥಿಗಳು) ಮತ್ತು ಕೊಲ್ಲಂನ ವಲಿಯೋಡೆ ನಿವಾಸಿ ಅನೂಪ್ (೨೨), ರೋಹಿತ್ ರಾಜ್ (೨೪) ಮತ್ತು ದೀಪು (ಕೆಎಸ್‌ಆರ್ ಟಿಸಿ ಬಸ್ ಪ್ರಯಾಣಿಕರು) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಗಾಯಗೊಂಡ ಸುಮಾರು ೫೦ ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು ಅವರಲ್ಲಿ. ಹಲವರ ಸ್ಥಿತಿ ಚಿಂತಾಜನಕವಾಗಿದೆ.ಪ್ರವಾಸಿ ಬಸ್ ೪೨ ವಿದ್ಯಾರ್ಥಿಗಳು ಮತ್ತು ಐವರು ಶಿಕ್ಷಕರನ್ನು ಕರೆದೊಯ್ಯುತ್ತಿತ್ತು.

ಕೆಎಸ್‌ಆರ್‌ಟಿಸಿ ಬಸ್ ಕೇರಳದ ಕೊಟ್ಟಾರಕ್ಕರದಿಂದ ತಮಿಳುನಾಡಿನ ಕೊಯಮತ್ತೂರಿಗೆ ತೆರಳುತ್ತಿದ್ದು, ೮೧ ಪ್ರಯಾಣಿಕರಿದ್ದರು. ದುರ್ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಸೇರಿದಂತೆ ೯ ಮಂದಿ ಸಾವನ್ನಪ್ಪಿದ್ದರೆ.

೪೦ ಜನರು ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಪಾಲಕ್ಕಾಡ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೇರಳ ರಸ್ತೆ ಸಾರಿಗೆ ಸಚಿವ ಆಂಟನಿ ರಾಜು ತಿಳಿಸಿದ್ದಾರೆ.ಪ್ರವಾಸಿ ಬಸ್ ಎರ್ನಾಕುಲಂನ ಮಾರ್ ಬಸೆಲಿಯೋಸ್ ಶಾಲೆಗೆ ಸೇರಿದ್ದು, ಇವರೆಲ್ಲ ತಮಿಳುನಾಡು ಪ್ರವಾಸಕ್ಕೆ ತೆರಳುತ್ತಿದ್ದರು. ಈ ಪ್ರವಾಸಿ ಬಸ್ ವೇಗವಾಗಿ ಚಲಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ದುರ್ಘಟನೆ ನಡೆದ ಸ್ಥಳದಲ್ಲಿ ಆಲತ್ತೂರು, ವಡಕಂಚೇರಿ ಅಗ್ನಿಶಾಮಕ ದಳ ಮತ್ತು ಜನರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.ಮೃತರಲ್ಲಿ ಮೂವರು ಕೆಎಸ್‌ಆರ್‌ಟಿಸಿ ಬಸ್‌ನ ಪ್ರಯಾಣಿಕರಾಗಿದ್ದರೆ, ಟೂರಿಸ್ಟ್ ಬಸ್‌ನಲ್ಲಿ ಐವರು ಕೊನೆಯುಸಿರೆಳೆದಿದ್ದಾರೆ.

೬ ಮಂದಿ ಪುರುಷರು ಮತ್ತು ಮೂವರು ಮಹಿಳೆಯರ ಪ್ರಾಣ ಪಕ್ಷಿ ಹಾರಿಹೋಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

Basaveshwara M

Crime reporter, Bangalore

Related Articles

Leave a Reply

Your email address will not be published. Required fields are marked *

Back to top button