ರಾಜ್ಯ

ಕೋವಿಡ್ 4ನೇ ಅಲೆ ಆತಂಕ: ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ.. ಹೀಗಿದೆ ಸಭೆಯ ಹೈಲೈಟ್ಸ್‌

Health minister

ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆ ನೂತನ ಮಾರ್ಗಸೂಚಿ ಹೊರಡಿಸಲಾಗುವುದು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯಸದ್ಯಕ್ಕೆ ನಿಯಮ ಉಲ್ಲಂಘನೆ ಮಾಡಿದ ಸಂದರ್ಭದಲ್ಲಿ ದಂಡ ವಿಧಿಸುವುದಿಲ್ಲ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ.

ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆ ನೂತನ ಮಾರ್ಗಸೂಚಿ ಹೊರಡಿಸಲಾಗುವುದು. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯವಾಗಲಿದೆ. ಆದರೆ ಸದ್ಯಕ್ಕೆ ನಿಯಮ ಉಲ್ಲಂಘನೆ ಮಾಡಿದ ಸಂದರ್ಭದಲ್ಲಿ ದಂಡ ವಿಧಿಸುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕೋವಿಡ್ ಸಭೆ ಬಳಿಕ ಮಾತನಾಡಿದ ಇವರು, ಸಿಎಂ ಜೊತೆ ಕೋವಿಡ್ ನಾಲ್ಕನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಕೆಲವೊಂದು ಪ್ರಮುಖ ತೀರ್ಮಾನಗಳಾಗಿವೆ. ಜನಜಂಗುಳಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಕಡ್ಡಾಯ ಮಾಸ್ಕ್- ಧರಿಸಬೇಕು. ಈ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗುತ್ತದೆ ಎಂದರು.

ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ನಿರ್ದೇಶನ ನೀಡಲಾಗುತ್ತದೆ. ಆದರೆ ತಕ್ಷಣ ಯಾವುದೇ ದಂಡ ವಿಧಿಸುವ ನಿರ್ಧಾರ ಕೈಗೊಂಡಿಲ್ಲ.ಸೋಂಕು ಪ್ರಕರಣ ಬೆಂಗಳೂರು ನಗರದಲ್ಲಿ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ 1.9% ರಷ್ಟು ಆಗಿದೆ. ಈ ನಿಟ್ಟಿನಲ್ಲಿ ನಿಗಾ ಇಡುವುದು ಹಾಗೂ ಮೇಲ್ವಿಚಾರಣೆ ಮಾಡುವ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.ಅಗತ್ಯ ಇದ್ದರೆ ಚಿಕಿತ್ಸೆ ನೀಡಲು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದರು.

ಲಸಿಕೆ ತೆಗೆದುಕೊಳ್ಳದವರಲ್ಲಿ ಕೊರೊನಾ ಸೋಂಕು ಉಲ್ಬಣವಾಗುತ್ತಿದೆ. ನಮ್ಮಲ್ಲಿ ಮೂರನೇ ಡೋಸ್ ಪಡೆದುಕೊಂಡವರ ಸಂಖ್ಯೆ ಕಡಿಮೆ ಇದೆ. ನಾಲ್ಕನೇ ಅಲೆ ಬರುವ ತನಕ ಕಾಯಬೇಡಿ. ಆದಷ್ಟು ಬೇಗ ಲಸಿಕೆ ಪಡೆದುಕೊಂಡು ತಮ್ಮನ್ನು ರಕ್ಷಣೆ ಮಾಡಿಕೊಳ್ಳಿ ಎಂದು ಮನವಿ ಮಾಡಿದರು.

ಈ ಬಗ್ಗೆ ಮಾಧ್ಯಮ,ಸಾಮಾಜಿಕ ಜಾಲತಾಣಗಳನ್ನು ಬಳಸಿ ಲಸಿಕೆ ಹಾಗೂ ಮಾಸ್ಕ್ ಧರಿಸುವ ಬಗ್ಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗುವುದು. ದಕ್ಷಿಣ ಕೊರಿಯಾ, ಜಪಾನ್, ಥಾಲೆಂಡ್ ನಿಂದ ನೇರವಾಗಿ ಬೆಂಗಳೂರು ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗುತ್ತದೆ.ಸಂಪರ್ಕ ನಂಬರ್ ಶೇಖರಣೆ ಮಾಡಿ ಟೆಲಿ ಮಾನಿಟರಿಂಗ್ ಮಾಡುವಂತಹ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದರು.

ಸೋಂಕಿತರಲ್ಲಿ ಹೊಸ ಥಳಿ ಪತ್ತೆಯಾಗಿಲ್ಲ. ಈ ಬಗ್ಗೆ ಎರಡು ಮೂರು ದಿನಗಳಲ್ಲಿ ಅಧಿಕೃತವಾಗಿ ವರದಿ ಬರಲಿದೆ ಎಂದರು. ನಿತ್ಯ ಹತ್ತು ಸಾವಿರ ಟೆಸ್ಟಿಂಗ್ ನಡೆಯುತ್ತಿದೆ. ರೋಗ ಲಕ್ಷಣಗಳು ಇದ್ದವರಿಗೆ ಟೆಸ್ಟಿಂಗ್ ಮಾಡಬೇಕು ಎಂಬ ಕೇಂದ್ರದ ಮಾರ್ಗಸೂಚಿ ಪಾಲನೆ ಮಾಡಲಾಗುತ್ತಿದೆ.ದೆಹಲಿಯಲ್ಲಿ ತೀವ್ರವಾದ ಸಮಸ್ಯೆ ಇಲ್ಲ, ಐಸಿಯು ಆಸ್ಪತ್ರೆ ದಾಖಲಾತಿ ಕಡಿಮೆ ಇದೆ. ಆದರೆ ವಿದೇಶಗಳಲ್ಲಿ ಹೆಚ್ಚಿದೆ. ಇದಕ್ಕೆ ಲಸಿಕೆ ಮಾಡದೇ ಇರುವುದು ಕಾರಣ ಎಂದಿದೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button