ಸಿನಿಮಾ

ಕ್ರಿಕೆಟಿಗ ಧೋನಿ ನಿರ್ಮಾಣದ ಮೊದಲ ಚಿತ್ರಕ್ಕೆ ದಳಪತಿ ವಿಜಯ್ ಹೀರೋ!

Msd produce Thalapathy Vijay

ದಳಪತಿ ವಿಜಯ್ ಇಂದು ತಮ್ಮ 48ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಾಲ ಕಲಾವಿದನಾಗಿ ಸಿನಿರಂಗಕ್ಕೆ ಪದಾರ್ಪಣೆ ಮಾಡಿದ ನಟ ದಕ್ಷಿಣ ಚಲನಚಿತ್ರೋದ್ಯಮದಲ್ಲಿ ಅನೇಕ ಯಶಸ್ವಿ ಚಲನಚಿತ್ರಗಳನ್ನು ನೀಡಿದ್ದಾರೆ. ಅವರ ಹುಟ್ಟುಹಬ್ಬದಂದು, ಅವರ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಇದೆ. ಭಾರತ ಕ್ರಿಕೆಟ್ ತಂಡದ‌ ಮಾಜಿ ನಾಯಕ ಎಂ.ಎಸ್ ಧೋನಿ ನಿರ್ಮಾಣದ ಮೊದಲ ಸಿನಿಮಾದಲ್ಲಿ ದಳಪತಿ ವಿಜಯ್‌ ಹೀರೋ ಆಗಲಿದ್ದಾರೆ.

ಇತ್ತೀಚಿನ ವರದಿಗಳ ಪ್ರಕಾರ, ಕ್ರಿಕೆಟಿಗ ಧೋನಿ ಸಿನಿಮಾವೊಂದನ್ನು ಸಿರ್ಮಿಸಲು ಸಿದ್ಧರಾಗಿದ್ದು, ತಮಿಳು ಚಲನಚಿತ್ರಗಳನ್ನು ನಿರ್ಮಿಸುವ ಮೂಲಕ ತಮ್ಮ ಆಫ್-ಸ್ಕ್ರೀನ್ ವೃತ್ತಿಜೀವನವನ್ನು ಪ್ರಾರಂಭಿಸಲು ಯೋಜಿಸಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ನಾಯಕ ತಮ್ಮ ಪ್ರೊಡಕ್ಷನ್ ಹೌಸ್ ಅಡಿಯಲ್ಲಿ ಸೂಪರ್ ಸ್ಟಾರ್ ವಿಜಯ್ ಅಭಿನಯದ ಸಿನಿಮಾವನ್ನು ನಿರ್ಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಧೋನಿ ಮತ್ತು ವಿಜಯ್ ಅವರಿಂದ ಈ ಬಗ್ಗೆ ಯಾವುದೇ ದೃಢೀಕರಣ ಬಂದಿಲ್ಲ.

ಎಂಎಸ್ ಧೋನಿ ಅವರು 2023 ರಂದು ಕ್ರಿಕೆಟ್ ಜಗತ್ತಿನಲ್ಲಿ ಕೊನೆಯ ಬಾರಿಗೆ ಐಪಿಎಲ್ ಆಡುತ್ತಾರೆ ಎಂದು ಊಹಿಸಲಾಗಿದೆ. ಐಪಿಎಲ್ 2022 ರ ಸಮಯದಲ್ಲಿ ಧೋನಿಯನ್ನು ನಿಮ್ಮ ಕೊನೆಯ ಪಂದ್ಯ ಯಾವುದಾಗಿರಲಿದೆ ಎಂದು ಕೇಳಿದಕ್ಕೆ ಉತ್ತರಿಸಿದ್ದ ಧೋನಿ, ನನ್ನ ಕೊನೆಯ ಪಂದ್ಯವನ್ನು ಚೆನ್ನೈನಲ್ಲಿ ಆಡಲು ಬಯಸುವುದಾಗಿ ಹೇಳಿದ್ದರು. ಹಾಗಾಗಿ ಮುಂದಿನ ಆವೃತ್ತಿಯಲ್ಲಿ ಧೋನಿ ಐಪಿಎಲ್​ಗೆ ವಿದಾಯ ಹೇಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಧೋನಿ ನಿರ್ಮಾಪಕರಾಗಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ.

ಧೋನಿ ನಿರ್ಮಿಸಿರುವ ದಳಪತಿಯವರ ಹೊಸ ಚಿತ್ರದಲ್ಲಿ ವಿಜಯ್ ಜೊತೆ ಲೇಡಿ ಸೂಪರ್ ಸ್ಟಾರ್ ನಯನತಾರಾ ನಟಿಸಲಿದ್ದಾರೆ ಎಂಬ ವದಂತಿಗಳು ಸಹ ಹರಿದಾಡುತ್ತಿವೆ.

Antony Raju A

Ncibtimesmedia Web Portal Director & national executive officer Contact:9482289151 Gmail: antonyraju166@gmail.com

Related Articles

Leave a Reply

Your email address will not be published. Required fields are marked *

Back to top button