
ಬೆಂಗಳೂರು: ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಐಶ್ವರ್ಯ ಶಾನಭಾಗ್ (28) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಒಡಿಶಾದ ಪುರಿಯಲ್ಲಿ ಖಾಸಗಿ ಹೋಟೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದೇ ಗುರುವಾರ ಒಡಿಶಾದಲ್ಲಿ ಆತ್ಮಹತ್ಯೆಗೆ ಐಶ್ವರ್ಯ ಶರಣಾಗಿದ್ದಾರೆ. ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಐಶ್ವರ್ಯ, ಕಾನ್ಫರೆನ್ಸ್‌ಗಾಗಿ ಮೈಸೂರಿಂದ ಒಡಿಶಾಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.
ಕಳೆದ ಎಂಟು ತಿಂಗಳ ಹಿಂದೆ ನೀತಿನ್ ಎಂಬುವವರ ಜೊತೆ ಇವೆ ವಿವಾಹವಾಗಿತ್ತು.
ಗಂಡನ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಐಶ್ವರ್ಯ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಒಡಿಶಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.