ಅಪರಾಧ
ಗಣೇಶ ವಿಸರ್ಜನೆ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ

ಗಣೇಶ ವಿಸರ್ಜನೆ ವೇಳೆ ಆರಂಭವಾದ ಗಲಾಟೆಯು ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ.
ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದ ನಿವಾಸಿ ಅರ್ಜುನಗೌಡ ಪಾಟೀಲ್ (೨೦) ಕೊಲೆಯಾದ ಯುವಕನಾಗಿದ್ದಾನೆ. ನಿನ್ನೆ ಸಂಜೆ ನಡೆದ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಆರಂಭವಾದ ಗಲಾಟೆ ವಿಕೋಪಕ್ಕೆ ತಿರುಗಿದೆ.
ಮತ್ತೊಂದು ಗುಂಪಿನ ಯುವಕನೊಬ್ಬ ಅರ್ಜುನಗೌಡನಿಗೆ ಚಾಕು ಇರಿದಿದ್ದಾರೆ. ಈ ವೇಳೆ ಅರ್ಜುನಗೌಡ ಕುಸಿದು ನೆಲಕ್ಕೆ ಬೀಳುತ್ತಿದ್ದಂತೆ ಹಂತಕರು ಪರಾರಿಯಾಗಿದ್ದಾರೆ.ಸ್ಥಳಕ್ಕೆ ಮುರಗೋಡ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಸದ್ಯ ಕೊಲೆಯಾದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.