Uncategorized
ಗದ್ದೆಗೆ ಔಷಧಿ ಸಿಂಪಡಿಸಲು ಹೋದ ತಂದೆ-ಮಗ ಸೇರಿ ಮೂವರು ವಿದ್ಯುತ್ ತಂತಿ ತುಳಿದು ಸಾವು

ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟಿರುವ ಆಘಾತಕಾರಿ ಘಟನೆ ಮೈಸೂರು (Mysuru) ಜಿಲ್ಲೆಯ ಟಿ ನರಸೀಪುರ ತಾಲೂಕಿನ ನಿಲಸೋಗೆ ಗ್ರಾಮದಲ್ಲಿ ಸಂಭವಿಸಿದೆ.
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ಗ್ರಾಮದ ನಿವಾಸಿಗಳಾದ ಮಗ ಹರೀಶ್ (32), ತಂದೆ ರಾಚೇಗೌಡ (60) ಹಾಗೂ ಕೂಲಿ ಕಾರ್ಮಿಕ ಮಹದೇವಸ್ವಾಮಿ (38) ಮೃತಪಟ್ಟಿದ್ದಾರೆ.
ಇಂದು ಬೆಳಿಗ್ಗೆ ಭತ್ತದ ಗದ್ದೆಗೆ ಔಷಧಿ ಸಿಂಪಡಿಸಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ.ಜಮೀನಿನ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತುಂಡಾಗಿ ಕೆಳಕ್ಕೆ ಬಿದ್ದಿತ್ತು.
ಇದನ್ನು ಗಮನಿಸದೇ ಜಮೀನಿನಲ್ಲಿ ಕೆಲಸಕ್ಕೆ ಇಳಿದಿದ್ರು. ವಿದ್ಯುತ್ ಪ್ರವಹಿಸುತ್ತಿರುವುದು ಗೊತ್ತಿಲ್ಲದೆ ತಂತಿ ತುಳಿದಿದ್ದಾರೆ.ಘಟನಾ ಸ್ಥಳಕ್ಕೆ ಚೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.